
ಬೆಂಗಳೂರು, ಸೆಪ್ಟೆಂಬರ್ 25:ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ರಾಜ್ಯಗಳಲ್ಲಿ ಭಾರಿ ಮಳೆ ಆಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ.
ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ 10 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸುರಿಯಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಕಳೆದ ಒಂದೆರೆಡು ದಿನಗಳಿಂದ ಕೊಂಚ ಬಿಡುವು ನೀಡಿದ್ದ ಮಳೆ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಮುಂದಿನ 2 ದಿನ ಹಾಗೂ ಉತ್ತರ ಒಳನಾಡಿನ ಬೀದರ್, ಧಾರವಾಡ, ಗದಗ, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಮುಂದಿನ 24 ಗಂಟೆ ಗುಡುಗು ಮಿಂಚು ಸಹಿತ ವ್ಯಾಪಕ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಎಂದು ಹವಾಮಾನ ಇಲಾಖೆ ತಿಳಿಸಿದೆ.