
ನವದೆಹಲಿ : ಕೃಷಿ ಮಸೂದೆಗಳನ್ನು ವಿರೋಧಿಸಿ ನವದೆಹಲಿಯ ಇಂಡಿಯಾ ಗೇಟ್ ಬಳಿ ಪ್ರತಿಭಟನೆ ನಡೆಯುತ್ತಿದ್ದು, ಈವೇಳೆ ಪ್ರತಿಭಟನಾಕಾರರು ಇಂಡಿಯಾ ಗೇಟ್ ಬಳಿ ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರೈತರು ಹಾಗೂ ವಿಪಕ್ಷಗಳ ವಿರೋಧದ ನಡುವೆಯೇ ಸಂಸತ್ ನಲ್ಲಿ ಅಂಗೀಕಾರವಾಗಿರುವ ಕೃಷಿ ಸಂಬಂಧಿ ಮೂರು ಮಸೂದೆಗಳಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾನುವಾರ ಅಂಕಿತ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ರೈತರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.
ದೆಹಲಿಯ ಸೆಂಟ್ರಲ್ ಪ್ರದೇಶದಲ್ಲಿ ಹಳೆಯ ಟ್ರ್ಯಾಕ್ಟರ್ ವೊಂದಕ್ಕೆ ಬೆಂಕಿ ಹಚ್ಚಿದ್ದಾರೆ. ಸ್ಥಳಕ್ಕೆ ಅಗ್ನಿ ಶಾಮಕ ದಳ ಆಗಮಿಸಿ ಬೆಂಕಿಯನ್ನು ನಂದಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.













