
ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಅರೋಪ ಪ್ರಕರಣದಲ್ಲಿ ಆ್ಯಂಕರ್ ಅನುಶ್ರೀ ವಿಚಾರಣೆ ನಡೆಸದಂತೆ ರಾಜಕಾರಣಿವೊಬ್ಬರು ಒತ್ತಡ ಹಾಕುತ್ತಿದ್ದಾರೆ ಎನ್ನಲಾಗಿದೆ. ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಕೇಸ್ ನಲ್ಲಿ ಅನುಶ್ರೀ ವಿಚಾರಣೆ ಮಾಡದಂತೆ ಪೊಲೀಸರು ಮತ್ತು ಸರ್ಕಾರಕ್ಕೆ ಪ್ರಭಾವಿ ರಾಜಕಾರಣಿಯೊಬ್ಬರು ಭಾರೀ ಒತ್ತಡ ಹೇರುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಡ್ರಗ್ಸ್ ದಂಧೆ ಪ್ರಕರಣದಲ್ಲಿ ಅನುಶ್ರೀ ಅವರನ್ನು ರಕ್ಷಣೆ ಮಾಡಲು ರಾಜಕಾರಣಿಯೊಬ್ಬರು ತಮ್ಮ ಪ್ರಭಾವ ಬಳಸಿ ಪೊಲೀಸರ ಮೇಲೆ ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದ್ದು, ಡೋಪಿಂಗ್ ಟೆಸ್ಟ್ ನಡೆಸದಂತೆ ಪೊಲೀಸರಿಗೆ ರಾಜಕಾರಣಿ ಒತ್ತಡ ಹೇರುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.