ಎಪಿಎಂಸಿ, ಭೂ ಸುಧಾರಣೆ ಮತ್ತು ಕಾರ್ಮಿಕ ತಿದ್ದುಪಡಿ ಕಾಯ್ದೆ ಸುಗ್ರೀವಾಜ್ಞೆ ಮೂಲಕ ಜಾರಿಗೆ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ
ಬೆಂಗಳೂರು : ತೀವ್ರ ವಿರೋಧದ ನಡುವೆಯೂ ರಾಜ್ಯದ ವಿಧಾನಮಂಡಲದ ಅಧಿವೇಶನದಲ್ಲಿ ಮೂರು ಕೃಷಿ ಕಾಯ್ದೆಗಳಿಗೆ ಅನುಮೋದನೆ ನೀಡಲಾಗಿತ್ತು. ಇಂತಹ ಕಾಯ್ದೆಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರುವಂತ ನಿರ್ಧಾರಕ್ಕೆ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ. ಈ ಮೂಲಕ ಎಪಿಎಂಸಿ, ಭೂ ಸುಧಾರಣೆ ಮತ್ತು ಕಾರ್ಮಿಕ ತಿದ್ದುಪಡಿ ಕಾಯ್ದೆಗಳನ್ನು ಸುಗ್ರೀವಾಜ್ಞೆ ಮೂಲಕ ರಾಜ್ಯ ಸರ್ಕಾರ ಜಾರಿಗೆ ತರಲಿದೆ.
ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಿತು. ಇಂತಹ ಸಚಿವ ಸಂಪುಟ ಸಭೆಯಲ್ಲಿ ಎಪಿಎಂಸಿ ತಿದ್ದುಪಡಿ ಕಾಯ್ದೆ, ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಮತ್ತು ಕಾರ್ಮಿಕ ತಿದ್ದುಪಡಿ ಕಾಯ್ದೆಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರುವ ಕುರಿತಂತೆ ಬಿಸಿ ಬಿಸಿ ಚರ್ಚೆ ನಡೆಯಿತು.
ಸಚಿವ ಸಂಪುಟ ಸಭೆಯಲ್ಲಿ ತೀವ್ರ ಚರ್ಚೆಯ ಮೂಲಕ 3 ತಿದ್ದುಪಡಿ ಕಾಯ್ದೆಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರುವಂತ ನಿರ್ಣಯಕ್ಕೆ ಒಪ್ಪಿಗೆ ಸೂಚಿಸಲಾಗಿದೆ. ಈ ಮೂಲಕ ಎಪಿಎಂಸಿ, ಭೂ ಸುಧಾರಣೆ ಮತ್ತು ಕಾರ್ಮಿಕ ತಿದ್ದುಪಡಿ ಕಾಯ್ದೆಗಳನ್ನು ಮತ್ತೆ ಸುಗ್ರೀವಾಜ್ಞೆ ಮೂಲಕ ರಾಜ್ಯ ಸರ್ಕಾರ ಜಾರಿಗೆ ತರಲು ನಿರ್ಧರಿಸಿದೆ.