
ಉಡುಪಿ ಅ. 2 : ಇಂದು ಗಾಂಧಿ ಜಯಂತಿಯ ಪ್ರಯುಕ್ತ ಅಜ್ಜರಕಾಡು ಭುಜಂಗ ಪಾರ್ಕಿನಲ್ಲಿರುವ ಗಾಂಧೀಜಿಯ ಪ್ರತಿಮೆಗೆ ಶಾಸಕ ಶ್ರೀ ಕೆ ರಘುಪತಿ ಭಟ್ ರವರು ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.

ಬಳಿಕ ದುರಸ್ತಿ ಗೊಳಿಸಿದ ಕ್ಲಾಕ್ ಟವರನ್ನು ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಉದ್ಘಾಟಿಸಿದರು. ಸ್ಕೌಟ್ ಅಂಡ್ ಗೈಡ್ಸ್ ಅವರಿಗೆ ಒಣ ಕಸವನ್ನು ಸಂಗ್ರಹಿಸಲು ಸಾಂಕೇತಿಕವಾಗಿ ಚೀಲಗಳನ್ನು ವಿತರಿಸಲಾಯಿತು. ಈ ಸಂದರ್ಭ ಕಿರುಚಿತ್ರ ಸ್ಪರ್ಧೆ ವಿಜೇತರರಿಗೆ ಬಹುಮಾನ ವಿತರಿಸಲಾಯಿತು.
ಜಿಲ್ಲಾಧಿಕಾರಿಗಳಾದ ಜಿ. ಜಗದೀಶ್, ಪೋಲಿಸ್ ವರಿಷ್ಠಾಧಿಕಾರಿಗಳಾದ ಎನ್. ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿಗಳಾದ ಸದಾಶಿವ ಪ್ರಭು, ನಗರಸಭೆಯ ಪೌರಾಯುಕ್ತರಾದ ಆನಂದ್ ಸಿ ಕಲ್ಲೋಲಿಕರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಘವೇಂದ್ರ ಕಿಣಿ ಮತ್ತು ಸ್ಥಳೀಯ ನಗರಸಭಾ ಸದಸ್ಯರು ಹಾಗೂ ಅಧಿಕಾರಿ ವರ್ಗದವರು ಮತ್ತು ನಗರಸಭೆ ಸಿಬ್ಬಂದಿಗಳು ಉಪಸ್ಥಿತರಿದ್ದರು.