ರಾಜ್ಯ

ಉತ್ತರಪ್ರದೇಶಲ್ಲಿ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ ನಿರ್ಲಕ್ಷತೆ ತೋರಿಸಿದ ಅಧಿಕಾರಿ ಹಾಗೂ ರಾಜಕಾರಣಿಗಳ ಮೇಲೆ ಕ್ರಮ ಕೈಗೊಳ್ಳಿ: ದಲಿತ ಸಂಘರ್ಷ ಸಮಿತಿ ಆಗ್ರಹ

ಬೆಂಗಳೂರು ಅಕ್ಟೋಬರ್‌ 2 : ಉತ್ತರ ಪ್ರದೇಶದ ಹತ್ರಾಸ್‌ ಜಿಲ್ಲೆಯಲ್ಲಿ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ ಕ್ರೂರವಾಗಿ ಹತ್ಯೆ ಮಾಡಿದ ಆರೋಪಿಗಳಿಗೆ ಕೂಡಲೇ ಶಿಕ್ಷಿಸಿ ಹಾಗೂ ಈ ಪ್ರಕರಣದಲ್ಲಿ ತಾರತಮ್ಯ ಮತ್ತು ನಿರ್ಲಕ್ಷತೆ ತೋರಿಸಿದ ಅಧಿಕಾರಿ ಹಾಗೂ ರಾಜಕಾರಣಿಗಳ ವಿರುದ್ದ ಕಾನೂನು ಕ್ರಮ ಜರುಗಿಸಿ ಸರ್ಕಾರವನ್ನು ವಜಾಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಡಾ ಸಿ ಎಸ್‌ ರಘು ಅವರ ನೇತೃತ್ವದಲ್ಲಿ ಇಂದ ಪ್ರತಿಭಟನೆಯನ್ನು ನಡೆಸಲಾಯಿತು.

ದಲಿತ ಮಹಿಳೆಯ ಮೇಲೆ ಅತ್ಯಚಾರ ಮಾಡಿದ ನಂತರ ಗಂಭೀರವಾಗಿ ಗಾಯಗೊಳಿಸಲಾಗಿತ್ತು. ದೆಹಲಿಯ ಆಸ್ಪತ್ರೆಗೆ ದಾಖಲಾಗಿ 14 ದಿನಗಳ ಕಾಲ ಜೀವನ ಮರಣದ ಹೋರಾಟ ನಡೆಸಿ ಚಿಕಿತ್ಸೆ ಫಲಕಾರಿ ಆಗದೆ ಮೃತಪಟ್ಟಿರುತ್ತಾರೆ. ನಂತರ ಹೆಣ್ಣು ಮಗಳ ಮೃತದೇಹವನ್ನು ಕುಟುಂಬಕ್ಕೆ ಒಪ್ಪಿಸದೆ ಆಕೆಯ ಅಂತಿಮ ದರ್ಶನಕ್ಕೂ ಸಹ ಸರಕಾರ ಅವಕಾಶ ನೀಡದೆ ರಾತ್ರೋರಾತ್ರಿ ಪೊಲೀಸ್‌ ಬಂದೋಬಸ್ತಿನಲ್ಲಿ ಮೃತದೇಹವನ್ನು ಸುಟ್ಟುಹಾಕಿರುತ್ತಾರೆ. ಇದು ಯುವತಿಯ ಸಾವಿನ ಘೋರಕೃತ್ಯಕ್ಕೆ ಕಾರಣರಾದ ಆರೋಪಿಗಳನ್ನು ರಕ್ಷಿಸುವ ಹೀನ ಕೃತ್ಯವಾಗಿದೆ. ದೇಶದಲ್ಲಿ ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ವಿಫಲವಾದ ಕೇಂದ್ರ ಹಾಗೂ ರಾಜ್ಯ ಸರಕಾರದ ಸರ್ವಾಧಿಕಾರಿ ದೋರಣೆ ತೋರುತ್ತರುವ ಉತ್ತರಪ್ರದೇಶದ ಉನ್ನತ ಅಧಿಕಾರಿಗಳು ಮತ್ತು ರಾಜಕಾರಣಿಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ರಾಷ್ಟ್ರಪತಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು.

 

Leave a Reply

Your email address will not be published. Required fields are marked *

Back to top button
error: Content is protected !!

Adblock Detected

Please consider supporting us by disabling your ad blocker