
ನವದೆಹಲಿ : ಅಕ್ಟೋಬರ್ 15 ರ ನಂತರ ಚಿತ್ರಮಂದಿರ ಓಪನ್ ಆಗುವ ನಿರೀಕ್ಷೆಯಲ್ಲಿದ್ದ ವರಿಗೆ ಬಿಗ್ ಶಾಕ್ ಎದುರಾಗಿದ್ದು, ದೇಶದ ಹಲವು ರಾಜ್ಯಗಳಲ್ಲಿ ಅಕ್ಟೋಬರ್ 15 ರಂದು ಥಿಯೇಟರ್ ಗಳು ಓಪನ್ ಆಗುವುದು ಅನುಮಾನ ಎನ್ನಲಾಗಿದೆ.
ಅಕ್ಟೋಬರ್ 15 ರಿಂದ ಚಿತ್ರಮಂದಿರಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿದೆ. ಆದರೆ ಚಿತ್ರಮಂದಿರ ರೀ ಓಪನ್ ಗೆ ಎಕ್ಸಿಬ್ಯೂಟರ್ ಗಳು ಹಿಂದೇಟು ಹಾಕುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ ನಂತರವೇ ಚಿತ್ರಮಂದಿರಗಳ ಓಪನ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಆಂಧ್ರ ಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ತಮಿಳುನಾಡು, ಕೇರಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಚಿತ್ರಮಂದಿರಗಳು ತೆರೆಯುವುದು ಅನುಮಾನ ಎಂದು ಹೇಳಲಾಗುತ್ತಿದೆ.