ರಾಜ್ಯ
ಡಿಕೆಶಿ ಮನೆ ಮೇಲಿನ ಸಿಬಿಐ ದಾಳಿ ರಾಜಕೀಯ ದುಷ್ಟತನದ ಪರಮಾವಧಿ : ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ. ಸುರೇಶ್ ಅವರ ಮನೆ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿರುವುದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮನೆ ಮೇಲೆ ಮೋದಿ ಸರ್ಕಾರ ನಡೆಸಿರುವ ಸಿಬಿಐ ದಾಳಿ ರಾಜಕೀಯ ದುಷ್ಟತನದ ಪರಮಾವಧಿ. ಇದು ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಎದುರಿಸಲಿಕ್ಕಾಗದ ಬಿಜೆಪಿ ನಾಯಕರ ನೈತಿಕ ದಿವಾಳಿತನವನ್ನು ತೋರಿಸುತ್ತದೆ ಎಂದು ಕಿಡಿಕಾರಿದ್ದಾರೆ.
ಕೆಪಿಸಿಸಿ ಅಧ್ಯಕ್ಷರಾದ @DKShivakumar ಮನೆ ಮೇಲೆ @narendramodi ಸರ್ಕಾರ ನಡೆಸಿರುವ ಸಿಬಿಐ ದಾಳಿ ರಾಜಕೀಯ ದುಷ್ಟತನದ ಪರಮಾವಧಿ.
ಇದು ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಎದುರಿಸಲಿಕ್ಕಾಗದ @BJP4India ನಾಯಕರ ನೈತಿಕ ದಿವಾಳಿತನವನ್ನು ತೋರಿಸುತ್ತದೆ.
— Siddaramaiah (@siddaramaiah) October 5, 2020