ಕರಾವಳಿ
ಮೋದಿ ಬ್ರಿಗೇಡ್ ಕಟಪಾಡಿ ವತಿಯಿಂದ 70 ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ

ಉಡುಪಿ ಅ.4 : ಮೋದಿ ಬ್ರಿಗೇಡ್ ಕಟಪಾಡಿ ಇದರ ವತಿಯಿಂದ ಪ್ರಧಾನಿ ಶ್ರೀ ನರೇಂದ್ರ ಮೋದಿ ಯವರ 70 ನೇ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ವಿವಿಧ ಕಾರ್ಯಕ್ಷೇತ್ರದಲ್ಲಿ ಅದ್ವಿತೀಯ ಸಾಧನೆಗೈದ 70 ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ ಸಪ್ತತಿ ಸಂಭ್ರಮದಲ್ಲಿ ಮುಖ್ಯ ಅತಿಥಿಯಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರಾದ ಶ್ರೀ ಯಶ್ ಪಾಲ್ ಸುವರ್ಣ ಭಾಗವಹಿಸಿದರು.

ಸಮಾರಂಭದಲ್ಲಿ ಶಾಸಕರಾದ ಶ್ರೀ ಲಾಲಾಜಿ ಮೆಂಡನ್, ಕಾಪು ಬಿಜೆಪಿ ಕ್ಷೇತ್ರಾಧ್ಯಕ್ಷರಾದ ಶ್ರೀಕಾಂತ ನಾಯಕ್, ಉದ್ಯಮಿ ಶ್ರೀ ಸುರೇಶ್ ಶೆಟ್ಟಿ ಗುರ್ಮೆ, ಹಳೆ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶ್ರೀ ಪ್ರಸಾದ್ ಶೆಣೈ, ಶಿರ್ವ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಕುತ್ಯಾರು ಪ್ರಸಾದ್ ಶೆಟ್ಟಿ ಉದ್ಯಮಿ ಶ್ರೀ ಪ್ರಭಾಕರ ಪೂಜಾರಿ, ಮೋದಿ ಬ್ರಿಗೇಡ್ ಸಂಚಾಲಕರಾದ ಶ್ರೀ ಗುರುಕೃಪಾ ರಾವ್, ಸಹ ಸಂಚಾಲಕಿ ನೀತಾ ಪ್ರಭು ಉಪಸ್ಥಿತರಿದ್ದರು.