ರಾಜ್ಯ

ಶಾಲಾ – ಕಾಲೇಜು ಆರಂಭ ಕುರಿತಂತೆ ಮಹತ್ವದ ಸಭೆ : ಬಿ. ಶ್ರೀರಾಮುಲು

ಬೆಂಗಳೂರು : ಅಕ್ಟೋಬರ್ 15 ರಿಂದ ಶಾಲೆಗಳನ್ನು ಪುನರಾರಂಭ ಮಾಡಲು ಅನುಮತಿ ನೀಡಿರುವ ಕೇಂದ್ರ ಸರ್ಕಾರ ಸೋಮವಾರ ಮಾರ್ಗಸೂಚಿ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭದ ಕುರಿತಂತೆ ಆರೋಗ್ಯ ಸಚಿವ ಬಿ. ಶ್ರೀರಾಮುಲು ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಯಲಿದೆ.

ಇಂದು ನಡೆಯಲಿರುವ ಸಭೆಯಲ್ಲಿ ಕೇಂದ್ರ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳ ಪ್ರಕಾರ ಶಾಲಾ-ಕಾಲೇಜು ಆರಂಭದ ಕುರಿತಂತೆ ಚರ್ಚೆ ನಡೆಯಲಿದೆ. ಪ್ರಾಥಮಿಕ ಶಾಲೆ ಆರಂಭ ಮಾಡಬೇಕೋ ಅಥವಾ ಬೇಡವೋ ಎನ್ನುವ ಕುರಿತು ಇಂದು ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!