ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ದುರ್ಬಳಕೆ ಆಗದಿರಲಿ : ಪ್ರಧಾನಿ ಮೋದಿ

ನವದೆಹಲಿ : ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಜವಾಬ್ದಾರಿಯುತವಾಗಿ ಬಳಸುವ ಅಗತ್ಯವಿದ್ದು, ಈ ತಂತ್ರಜ್ಞಾನವು ದುರ್ಬಳಕೆ ಆಗದಂತೆ ನೋಡಿಕೊಳ್ಳ ಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಹಾಗೂ ನೀತಿ ಆಯೋಗ ಆಯೋಜಿಸಿರುವ “ಸಾಮಾಜಿಕ ಸಬಲೀಕರಣಕ್ಕಾಗಿ ಜವಾಬ್ದಾರಿಯುತ ಕೃತಕ ಬುದ್ಧಿಮತ್ತೆ ‘RAISE – 2020′ ಎಂಬ ವರ್ಚುವಲ್ ಶೃಂಗಸಭೆಯನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ . ಭಾರತವು ಜಗತ್ತಿನ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್‌ನ ಕೇಂದ್ರವಾಗಬೇಕು ಎಂದು ನಾವು ಬಯಸುತ್ತೇವೆ ಎಂದರು.
ಕೃತಕ ಬುದ್ಧಿಮತ್ತೆ ತಂತ್ರಜ್ಞಾನವು ಕೃಷಿ ವಲಯ, ಸ್ವಾಸ್ಥ್ಯ ಸೇವೆ, ಶಿಕ್ಷಣ ಕ್ಷೇತ್ರವನ್ನು ಸಶಕ್ತಗೊಳಿಸುವ ಜತೆಯಲ್ಲೇ, ಮುಂದಿನ ತಲೆಮಾರಿನ ನಗರಗಳ ಮೂಲಸೌಕರ್ಯಗಳನ್ನು ಸೃಷ್ಟಿಸಲು, ಟ್ರಾಫಿಕ್ ಜಾಮ್ ಕಡಿಮೆಗೊಳಿಸಲು, ಒಳಚರಂಡಿ ವ್ಯವಸ್ಥೆ ಯನ್ನು ಉತ್ತಮಗೊಳಿಸಲು ಹಾಗೂ ವಿಪತ್ತು ನಿರ್ವಹಣಾ ವ್ಯವಸ್ಥೆಯನ್ನು ಸದೃಢಗೊಳಿಸುವಲ್ಲಿ ದೊಡ್ಡ ಪಾತ್ರ ನಿರ್ವಹಿಸಬಲ್ಲದು ಎಂದಿದ್ದಾರೆ.