ರಾಜ್ಯ

ಹಿರಿಯ ನಟ ಹುಲಿವಾನ್ ಗಂಗಾಧರಯ್ಯ ವಿಧಿವಶ..

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಧಾಖಲಿಸಲಾಗಿತ್ತು ,ನಿನ್ನೆ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ..

1500 ಕ್ಕೂ ಹೆಚ್ಚು ನಾಟಕ 118 ಕ್ಕೂ ಅಧಿಕ ಸಿನಿಮಾಗಳ ಲ್ಲಿ ನಟಿಸಿದ ಈ ಹಿರಿಯ ಕಲಾವಿದ ಕಿರು ತೆರೆಯಲ್ಲೂ ಬ್ಯುಸಿಯಾಗಿದ್ದಾರೆ..

ಪ್ರಸ್ತುತ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಪ್ರೇಮ ಲೋಕ ಧಾರಾವಾಹಿಯಲ್ಲಿ ಪ್ರಮುಖ ಪೋಷಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.. ಈ ಧಾರಾವಾಹಿಯ ಚಿತ್ರೀಕರಣ ದಲ್ಲಿ ಭಾಗಿಯಾಗಿದ್ದರು..ಚಿತ್ರೀಕರಣ ದ ಎರಡನೇ ದಿನಕ್ಕೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು..ಸಾಕಷ್ಟು ಹಿಟ್ ಸಿನಿಮಾಗಳಲ್ಲಿ ಅಭಿನಯಿಸಿದ್ದ ಗಂಗಾಧರ ಯ್ಯ ಸ್ಯಾಂಡಲ್ ವುಡ್ ನ ಬಹುತೇಕ ಹಿರಿಯ ಕಿರಿಯ ಕಲಾವಿದರೊಂದಿಗೆ ತೆರೆ ಹಂಚಿಕೊಂಡಿದ್ದರು..ಅಲ್ಲದೇ ಅನೇಕ ಧಾರಾವಾಹಿಗಳಲ್ಲಿ ನಟಿಸಿ ಎಲ್ಲರ ಮನೆ ಮಾತಾಗಿದ್ದರು..ಮೂವರು ಹೆಣ್ಣುಮಕ್ಕಳು ಮತ್ತು ಪತ್ನಿಯನ್ನು ಅಗಲಿರುವ ಗಂಗಾಧರ್ ಅವರ ಆತ್ಮಕ್ಕೆ ಶಾಂತಿ ಸಿಗಲಿ..

Leave a Reply

Your email address will not be published. Required fields are marked *

Back to top button
error: Content is protected !!

Adblock Detected

Please consider supporting us by disabling your ad blocker