ಕುಂದಾಪುರ : ಐಪಿಎಲ್ ಬೆಟ್ಟಿಂಗ್ ಪೊಲೀಸರಿಂದ ಒಂಬತ್ತು ಮಂದಿ ಆರೋಪಿಗಳ ಬಂಧನ

ಕುಂದಾಪುರ ಅ. 6 : ಕುಂದಾಪುರದಲ್ಲಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಒಂಬತ್ತು ಜನ ಆರೋಪಿ ಗಳನ್ನು ಕುಂದಾಪುರ ಠಾಣೆಯ ಪಿ. ಎಸ್. ಐ. ಸದಾಶಿವ ಆರ್ ಗವರೋಜಿ ಮತ್ತು ಅವರ ಪೊಲೀಸ್ ತಂಡ ದಾಳಿ ನಡೆಸಿ ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು ಪ್ರಸಾದ್ ಆಚಾರಿ, ಶರತ್, ಪ್ರಶಾಂತ್, ಪುರಂದರ, ಸಚಿನ್, ಸಂತೋಷ, ಹರೀಶ್, ಸುಧಾಕರ, ಪ್ರಸಾದ್ ಪೂಜಾರಿ ಎಂದು ತಿಳಿದು ಬಂದಿದೆ.
ಕುಂದಾಪುರ ತಾಲೂಕು ಕೊಟೇಶ್ವರ ಗ್ರಾಮದ ಕುಂಬ್ರಿ ಜಂಕ್ಷನ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಐಪಿಎಲ್ ಕ್ರಿಕೆಟ್ ಪಂದ್ಯಾಟದ ಬೆಟ್ಟಿಂಗ್ ನಡೆಸುತ್ತಿದ್ದಾರೆ ಎಂದು ಖಚಿತ ಮಾಹಿತಿ ಬಂದ ಮೇರೆಗೆ ಅದರಂತೆ ಸದ್ರಿ ಸ್ಥಳಕ್ಕೆ ದಾಳಿ ಮಾಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲು ಮಾನ್ಯ ನ್ಯಾಯಾಲಯದ ಅನುಮತಿಯನ್ನು ಪಡೆದುಕೊಂಡು ಸ್ಥಳಕ್ಕೆ ಧಾವಿಸಿದ್ದಾರೆ.
ಠಾಣಾ ಸಿಬ್ಬಂದಿಯವರೊಂದಿಗೆ ಇಲಾಖಾ ವಾಹನ ನಂಬ್ರ : KA.20.G.263 ನೇದರಲ್ಲಿ ಪಂಚರನ್ನು ಜೊತೆಯಲ್ಲಿ ಕರೆದುಕೊಂಡು ಕುಂಬ್ರಿ ಬಸ್ ನಿಲ್ದಾಣದ ಸಮೀಪ ರಾತ್ರಿ 8:00 ಗಂಟೆಗೆ ತಲುಪಿದಾಗ ಕುಂಬ್ರಿ ಜಂಕ್ಷನ್‌ನ ಬಳಿಯ ಸಾರ್ವಜನಿಕ ಸ್ಥಳದಲ್ಲಿ 8 ಜನರು ನಿಂತುಕೊಂಡಿದ್ದು ಅವರ ಪೈಕಿ ಓರ್ವನು ರಾಯಲ್ ಚಾಲೆಂಜರ್ಸ್ ಬೆಂಗಳೂರು ರೂ 1000ಕ್ಕೆ 1000 ರೂ, ಡೆಲ್ಲಿ ಕ್ಯಾಪಿಟಲ್ಸ್ 1000 ಕ್ಕೆ 1300 ಎಂದು ಜೋರಾಗಿ ಹೇಳುತ್ತಾ ನೋಟ್ ಪುಸ್ತಕದಲ್ಲಿ ವಿವರಗಳನ್ನು ಬರೆದುಕೊಳ್ಳುತ್ತಿದ್ದು ಇತರರು ಕೈಯಲ್ಲಿ ಹಣವನ್ನು ಹಿಡಿದುಕೊಂಡು ರಾಯಲ್ ಚಾಲೆಂಜರ್ಸ್ ಬೆಂಗಳೂರು ರೂ 1000ಕ್ಕೆ 1000 ರೂ, ಡೆಲ್ಲಿ ಕ್ಯಾಪಿಟಲ್ಸ್ 1000 ಕ್ಕೆ 1300 ಎಂದು ಹೇಳುತ್ತಿರುವುದನ್ನು ಗಮನಿಸಿ ಇವರುಗಳು ತಮ್ಮ ಸ್ವಂತ ಲಾಭಕ್ಕಾಗಿ ಕ್ರಿಕೆಟ್ ಪಂದ್ಯದ ಮೇಲೆ ಹಣವನ್ನು ಪಣವಾಗಿಟ್ಟು ಬೆಟ್ಟಿಂಗ್ ನಡೆಸುತ್ತಾ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿರುವುದು ಕಂಡುಬಂದಿರುವುದರಿಂದ ಸ್ಥಳಕ್ಕೆ 8:15 ಗಂಟೆಗೆ ದಾಳಿ ನಡೆಸಿ ಆರೋಪಿತರನ್ನು ವಶಕ್ಕೆ ಪಡೆದು ಬೆಟ್ಟಿಂಗ್ ನಡೆಸಲು ಉಪಯೋಗಿಸಿದ ನಗದು ರೂ 17,000/-, ರೆಡ್ ಮಿ ಮೊಬೈಲ್ ಫೋನ್-1 ಹಾಗೂ ಒಂದು ನೋಟ್ ಪುಸ್ತಕವನ್ನು ವಶಪಡಿಸಿ ಕೊಳ್ಳಲಾಗಿದೆ.