ಕೊರೊನಾ ಪರೀಕ್ಷೆಗೆ ಒಪ್ಪದಿದ್ದರೆ 3 ವರ್ಷ ಜೈಲು, 50 ಸಾವಿರ ದಂಡ !!

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ನಿಯಂತ್ರಣ ಸಂಬಂಧ ಮತ್ತೆ ಕಠಿಣ ನಿಯಮಗಳಿಗೆ ರಾಜ್ಯ ಸರ್ಕಾರ ಮನಸ್ಸು ಮಾಡಿದೆ. ಕೊರೊನಾ ಪರೀಕ್ಷೆಗೆ ಒಪ್ಪದಿದ್ದರೆ ಇನ್ನು ಮುಂದೆ ದಂಡ ಹಾಗೂ ಜೈಲು ಶಿಕ್ಷೆಯನ್ನು ಘೋಷಿಸಿರುವ ಸರಕಾರ ಈ ಕುರಿತಂತೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.
50 ಸಾವಿರ ದಂಡ, 3ವರ್ಷ ಜೈಲು
ಯಾರಿಗೆ ಕೋವಿಡ್-19 ಪರೀಕ್ಷೆಗೆ ಒಳಪಡಲು ಸೂಚಿಸಲಾಗುತ್ತದೆಯೋ ಅಂತಹವರು ಕಡ್ಡಾಯ ವಾಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಪರೀಕ್ಷೆಗೆ ನಿರಾಕರಿಸುವಂತಿಲ್ಲ. ಒಂದು ವೇಳೆ ಪರೀಕ್ಷೆ ಮಾಡಿಸಿಕೊಳ್ಳುವುದಿಲ್ಲ ಎಂದರೆ 3 ವರ್ಷ ಜೈಲು ಅಥವಾ 50 ಸಾವಿರ ದಂಡದ ಶಿಕ್ಷೆ ವಿಧಿಸಲಾಗುತ್ತದೆ. ಎಂದು ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.
ರೋಗ ಹರಡುವಿಕೆ ತಡೆಯುವ ಉದ್ದೇಶದಿಂದ ಕೊರೊನಾ ಸೋಂಕಿತರು ಹಾಗೂ ಸೋಂಕು ಶಂಕಿತರನ್ನು ಗುರುತಿಸಲಾಗುತ್ತಿದೆ. ಉಸಿರಾಟ ಸಂಬಂಧಿ ತೊಂದರೆಗಳಿಂದ ಬಳಲುತ್ತಿರುವ ರೋಗಿಗಳು, ಕೊರೋನಾ ಚಿಕಿತ್ಸೆಯಲ್ಲಿ ತೊಡಗಿರುವ ಸಿಬ್ಬಂದಿ, ಆರೋಗ್ಯ ಸೇವಾ ಕ್ಷೇತ್ರದ ಕಾರ್ಯಕರ್ತರು, ಕಂಟೈನ್ ಮೆಂಟ್, ಬಫರ್ ವಲಯದಲ್ಲಿರುವ ವ್ಯಕ್ತಿಗಳು, ಆರೋಗ್ಯ ಸಿಬ್ಬಂದಿ ಗುರುತಿಸಲ್ಪಡುವ ಯಾವುದೇ ವ್ಯಕ್ತಿ ಅಥವಾ ಕೊರೋನಾ ಶಂಕಿತ ವ್ಯಕ್ತಿಗಳು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕಿದೆ .