
ನವದೆಹಲಿ : ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಉದ್ರೇಕಕಾರಿ ಭಾಷಣ ಮಾಡಿದ ಆರೋಪದ ಮೇಲೆ ಬಂಧಿತರಾಗಿದ್ದ ಡಾ. ಕಫೀಲ್ ಖಾನ್ ಅವರು 7 ತಿಂಗಳ ನಂತರ ಬಿಡುಗಡೆಯ ಭಾಗ್ಯ ಸಿಕ್ಕಿದೆ.
ಕಪಿಲ್ ಖಾನ್ ವಿರುದ್ಧ ದಾಖಲಾಗಿದ್ದ ಭದ್ರತಾ ಕಾಯ್ದೆ ಪ್ರಕರಣವನ್ನು ಕೈಬಿಡುವಂತೆ ಅಲಹಬಾದ್ ಹೈಕೋರ್ಟ್ ನಿರ್ದೇಶನ ನೀಡಿದೆ. ಹೀಗಾಗಿ ಕಫೀಲ್ ಖಾನ್ ಅವರು ಜೈಲಿನಿಂದ ಬಿಡುಗಡೆ ಯಾಗಲಿದ್ದಾರೆ.
ಸಿಎಎ ವಿರೋಧಿ ಹೋರಾಟದಲ್ಲಿ ತೊಡಗಿಸಿ ಕೊಂಡಿದ್ದ ಡಾ. ಕಫೀಲ್ ಖಾನ್ 2019ರ, ಡಿಸೆಂಬರ್ 10 ರಂದು ಅಲಿಗಡ್ ಮುಸ್ಲಿಮ್ ಯೂನಿವರ್ಸಿಟಿಯಲ್ಲಿ ಉದ್ರೇಕಕಾರಿ ಭಾಷಣ ಮಾಡಿದ್ದರು. ಹೀಗಾಗಿ ಐಪಿಸಿ ಸೆಕ್ಷನ್ 153 ಎ ಅಡಿಯಲ್ಲಿ ಖಾನ್ ವಿರುದ್ಧ ಪ್ರಕರಣ ದಾಖಲಾಯಿತು. ಫೆ. 13 ರಂದು ಅಲಿಘಡ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಆದೇಶದಂತೆ ಕಫೀಲ್ ಖಾಣ್ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ ಜಾರಿಗೊಳಿಸಲಾಗಿತ್ತು.