ಕರಾವಳಿ
ಶಾಸಕ ಎಸ್.ಎ.ರಾಮದಾಸ್ ಆಸ್ಪತ್ರೆಗೆ ದಾಖಲು

ಮೈಸೂರು : ಶಾಸಕ ಎಸ್.ಎ.ರಾಮದಾಸ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಸದ್ಯ ಅವರನ್ನು ಸ್ಥಳೀಯ ಜಯದೇವ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಎಸ್.ಎ.ರಾಮದಾಸ್ ಅವರಿಗೆ ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ. ಐಸಿಯುನಲ್ಲಿ ಅವರಿಗೆ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದಾರೆ.
ಕಳೆದ ಕೆಲವು ದಿನಗಳಿಂದ ದಸರಾ ಕಾರ್ಯಕ್ರಮ ದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದ ರಾಮದಾಸ್ ಅವರನ್ನು ಮುಂಜಾಗ್ರತಾ ಕ್ರಮವಾಗಿ ಅವರನ್ನು ಕೋವಿಡ್ 19 ಟೆಸ್ಟ್ ಗೂ ಒಳಪಡಿಸಲಾಗಿದೆ.