
ದಿವಂಗತ ನಟ ಚಿರಂಜೀವಿ ಸರ್ಜಾ ಅವರ ಪತ್ನಿ ಮೇಘನಾ ರಾಜ್ ಗೆ ಗಂಡು ಮಗು ಜನಿಸಿದೆ. ಮೇಘನಾ ರಾಜ್ ಅವರನ್ನು ನಿನ್ನೆ ನಗರದ ಅಕ್ಷ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಹೆರಿಗೆಯಾಗಿದ್ದು ಮೇಘನಾ ರಾಜ್ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಚಿರು ಹುಟ್ಟುಹಬ್ಬದ ದಿನದಂದು ಮೇಘನಾಗೆ 9 ತಿಂಗಳು ತುಂಬಿತ್ತು. ಇಂದು ಮೇಘನಾ ಚಿರಂಜೀವಿ ಸರ್ಜಾ ಎಂಗೇಜ್ ಮೆಂಟ್ ಆಗಿದ್ದ ದಿನ. 2017 ರ ಅಕ್ಟೋಬರ್ 22 ರಂದು ಚಿರು–ಮೇಘನಾ ನಿಶ್ಚಿತಾರ್ಥ ನಡೆದಿತ್ತು. ಇಂದೇ ಕುಟುಂಬಕ್ಕೆ ಮಗುವಿನ ಆಗಮನವಾಗಿದ್ದು, ಕುಟುಂಬಸ್ಥರಲ್ಲಿ ಸಂತಸ ಮನೆ ಮಾಡಿದೆ.
ಮೇಘನಾ ರಾಜ್ ಗೆ ಗಂಡು ಮಗು ಜನಿಸಿರುವ ಹಿನ್ನೆಲೆಯಲ್ಲಿ ಆಸ್ಪತ್ರೆ ಎದುರು ಚಿರಂಜೀವಿ ಸರ್ಜಾ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡುತ್ತಿದ್ದಾರೆ.