
ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ರಾಜ್ಯ ಸಚಿವರಾಗಿ ಆಯ್ಕೆಯಾದ ಸನ್ಮಾನ್ಯ ಶೋಭಾ ಕರಂದ್ಲಾಜೆ ಅವರಿಗೆ ಇಂದು ದಿನಾಂಕ 19-08-2021 ರಂದು ಅಜ್ಜರಕಾಡು ಪುರಭವನದಲ್ಲಿ ಭಾರತೀಯ ಜನತಾ ಪಾರ್ಟಿ, ಉಡುಪಿ ಜಿಲ್ಲೆ ವತಿಯಿಂದ ಆಯೋಜಿಸಲಾದ ಜನಾಶೀರ್ವಾದ ಕಾರ್ಯಕ್ರಮದಲ್ಲಿ ಶಾಸಕ ರಘುಪತಿ ಭಟ್ ಅವರು ಭಾಗವಹಿಸಿದರು.

ಈ ಸಂದರ್ಭದಲ್ಲಿ ಸಂಸದರು, ಬಿಜೆಪಿ ರಾಜ್ಯಾಧ್ಯಕ್ಷರ ನಳಿನ್ ಕುಮಾರ್ ಕಟೀಲ್, ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಸುಕುಮಾರ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ತುಳಸಿ ಮುನಿರಾಜು, ಬಿಜೆಪಿ ಹಿಂದುಳಿದ ವರ್ಗದ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ, ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ ಹಾಗೂ ರಾಜ್ಯ ಕಾರ್ಯಕಾರಣಿ ಸದಸ್ಯರು, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.















