ಇಂದು ಕರಾವಳಿ ಸೇರಿ ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ !!!

ಕಳೆದ ಮೂರ್ನಾಲ್ಕು ದಿನಗಳಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಶುರುವಾಗಿದ್ದು, ರೈತರು ಕೃಷಿ ಚಟುವಟಿಕೆಗಳನ್ನು ಚುರುಕುಗೊಳಿಸಿದ್ದಾರೆ. ನಿನ್ನೆ ಕೆಲವು ಜಿಲ್ಲೆಗಳಲ್ಲಿ ಕೊಂಚ ಬಿಸಿಲು ಮೂಡಿದ್ದು, ಹಲವೆಡೆ ತುಂತುರು ಮಳೆಯಾಗಿದೆ. ಆದರೆ, ಇಂದು ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೀಗಾಗಿ, ಇಂದು ಕೂಡ ಕರಾವಳಿ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕ ಮಾತ್ರವಲ್ಲದೆ, ನೆರೆಯ ರಾಜ್ಯಗಳಲ್ಲೂ ಮಳೆಯಾಗುತ್ತಿದೆ. ಹಲವು ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಇಂದು ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ನಾಲ್ಕೈದು ದಿನಗಳಿಂದ ಮಳೆಯಾಗುತ್ತಿದ್ದು, ಇಂದು ಕೂಡ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜೊತೆಗೆ, ಉತ್ತರ ಒಳನಾಡು, ಕಲ್ಯಾಣ ಕರ್ನಾಟಕದಲ್ಲಿ ಇಂದು ಮಳೆಯ ತೀವ್ರತೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಕೂಡ ಇಂದು ಭಾರೀ ಮಳೆಯಾಗಲಿದೆ.