ರಾಜ್ಯ
‘ಗ್ರಾಮ ಒನ್’ಗೆ ಸಿಎಂ ಚಾಲನೆ : ರಾಜ್ಯದ ʼಗ್ರಾಮೀಣ ಜನತೆʼಗೆ ಗುಡ್ ನ್ಯೂಸ್

ಬೆಂಗಳೂರು: ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯ ಕಲ್ಪಿಸುವ ‘ಗ್ರಾಮ ಒನ್’ ಕೇಂದ್ರದ ಪ್ರಾಯೋಗಿಕ ಅನುಷ್ಠಾನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ಚಾಲನೆ ನೀಡಿದರು.
ಈ ಗ್ರಾಮ್ ಒನ್ ಯೋಜನೆಯನ್ನ ಪ್ರಾಯೋಗಿಕವಾಗಿ ದಾವಣಗೆರೆ ಜಿಲ್ಲೆಯ 100 ಗ್ರಾಮಗಳಲ್ಲಿ ಶುರುಮಾಡಿದೆ. ಆದಾಯ ಮತ್ತು ಜಾತಿ ಪ್ರಮಾಣ ಪತ್ರ, ವೃದ್ಧಾಪ್ಯ ವೇತನ&ವಿಧವಾ ವೇತನ, ಅಂಗವಿಕಲ ವೇತನ, ಸಂಧ್ಯಾ ಸುರಾ ಯೋಜನೆ, ಹಿರಿಯ ನಾಗರಿಕರ ಗುರುತಿನ ಚೀಟಿ, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ಸೇರಿ 750ಕ್ಕೂ ಹೆಚ್ಚು ನಾಗರಿಕ ಸೇವೆಗಳು ಲಭ್ಯವಾಗಲಿವೆ.
ಸಾರ್ವಜನಿಕರ ಹಿತದೃಷ್ಟಿಯಿಂದ ಗ್ರಾಮ ಒನ್ ಕೇಂದ್ರವು ಬೆಳಗ್ಗೆ 8 ರಿಂದ ರಾತ್ರಿ 8 ಗಂಟೆಯವರೆಗೆ ಕಾರ್ಯನಿರ್ವಹಿಸಲಿದೆ. ಮುಂದಿನ ದಿನಗಳಲ್ಲಿ ಮೈಕ್ರೋ-ಬ್ಯಾಂಕಿಂಗ್ ವ್ಯವಸ್ಥೆಯೊಂದಿಗೆ ಮತ್ತಷ್ಟು ಸೇವೆಗಳನ್ನು ಗ್ರಾಮ ಒನ್ ಕೇಂದ್ರಗಳಲ್ಲಿ ನೀಡಲು ಉದ್ದೇಶಿಸಿದೆ ಎಂದು ಸಿಎಂ ತಿಳಿಸಿದರು