ಡಿಸೆಂಬರ್ 5 ರಂದು ಕರ್ನಾಟಕ ಬಂದ್ !

ಬೆಂಗಳೂರು, ನ.20: ರಾಜ್ಯ ಸರಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚಿಸಲು ಮುಂದಾಗಿರುವುದನ್ನು ಪ್ರತಿಭಟಿಸಿ ಡಿ.5ರಂದು ನಡೆಯಲಿರುವ ಕರ್ನಾಟಕ ಬಂದ್ ಅನ್ನು ವಿವಿಧ ಸಂಘಟನೆಗಳು ಬೆಂಬಲಿಸಿವೆ ಎಂದು ವಾಟಾಳ್ ನಾಗರಾಜ್ ತಿಳಿಸಿದ್ದಾರೆ. .
ಡಿ.5ರಂದು ಬೆಳಗ್ಗೆ 6 ರಿಂದ ಸಂಜೆ 6 ಗಂಟೆ ತನಕ ಬಂದ ನಡೆಸಲು ತೀರ್ಮಾನಿಸಲಾಗಿದೆ. ಕನ್ನಟ ಚಳವಳಿ ವಾಟಾಳ್ ಪಕ್ಷದ ವಾಟಾಳ್ ನಾಗರಾಜ ನೇತೃತ್ವದಲ್ಲಿ ಶುಕ್ರವಾರ ಕನ್ನಡ ಒಕ್ಕೂಟದ ಸಭೆ ನಡೆದಿದ್ದು, ಇದರಲ್ಲಿ ವಿವಿಧ ಸಂಘಟನೆಗಳು ಬಂದ್ ಗೆ ಬೆಂಬಲ ಘೋಷಿಸಿವೆ.
ಬಂದ್ ಮಾಡಬೇಡಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪನವರು ಮನವಿ ಮಾಡಿದ್ದಾರೆ. ಆದರೆ ನಾವು ನಮ್ಮ ತೀರ್ಮಾನವನ್ನು ಬದಲಾಯಿಸುವುದಿಲ್ಲ. ಬಂದ್ ದಿನ ಯಾವುದೇ ವಾಹನ ಇರುವುದಿಲ್ಲ. ಬೆಂಗಳೂರಿನಲ್ಲಿ ಟೌನ್ ಹಾಲ್ ನಿಂದ ಫ್ರೀಡಂ ಪಾರ್ಕ್ ತನಕ ಮೆರವಣಿಗೆ ನಡೆಸಲಿದ್ದೇವೆ ಎಂದು ವಾಟಾಳ್ ತಿಳಿಸಿದ್ದಾರೆ. ಹೋಟೆಲ್ ಸಂಘಟನೆಗಳು, ಅಂಗಡಿ ಮುಂಗಟ್ಟುಗಳು , ವ್ಯಾಪಾರ ಸಂಸ್ಥೆಗಳು ಬಂದ್ ಬೆಂಬಲಿಸಿವೆ ಎಂದಿದ್ದಾರೆ.