ಕರಾವಳಿ
ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ರಾಜ್ಯಾಧ್ಯಕ್ಷರಾಗಿ ಕೆ. ಜಯಪ್ರಕಾಶ್ ಹೆಗ್ಡೆ ನೇಮಕ

ಉಡುಪಿ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನಾಗಿ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.
ಜಯಪ್ರಕಾಶ್ ಹೆಗ್ಡೆ ಅವರು ಬ್ರಹ್ಮಾವರ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಉಡುಪಿ ಚಿಕ್ಕಮಗಳೂರು ಲೋಕಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಗೆದ್ದು ಸಂಸದರಾಗಿದ್ದರು. ಅಲ್ಲದೆ, ಮೀನುಗಾರಿಕಾ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಕಳೆದ ಕೆಲ ವರ್ಷಗಳ ಹಿಂದೆ ಕಾಂಗ್ರೆಸ್ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದರು.