ಕರ್ನಾಟಕ ಬಿಟ್ಟು ಬೇರೆ ರಾಜ್ಯಗಳಲ್ಲಿ ರವಿ ಪೂಜಾರಿ ವಿಚಾರಣೆಗೆ ಒಳಪಡಿಸಲು ಸಾಧ್ಯವಿಲ್ಲ !

ಕಳೆದ ವಾರ ವಿದೇಶಾಂಗ ಸಚಿವಾಲಯದಿಂದ (ಎಂಇಎ) ಮುಂಬೈ ಪೊಲೀಸರಿಗೆ ಬರೆದ ಪತ್ರವೊಂದು ಕಾನೂನು ಅಡಚಣೆಯನ್ನು ಸೃಷ್ಟಿಸಿದೆ, ಈ ವಾರ ಗ್ಯಾಂಗ್ ಸ್ಟರ್ ರವಿ ಪೂಜಾರಿಯವರನ್ನು ಮುಂಬೈ ಪೊಲೀಸರು ವಶಕ್ಕೆ ತೆಗೆದುಕೊಳ್ಳಲು ಸಜ್ಜಾಗಿದ್ದರು.
2019 ಮಾರ್ಚ್ ನಲ್ಲಿ ಸೆನೆಗಲ್ ರವಿ ಪೂಜಾರಿ ಯವರನ್ನು ಕರ್ನಾಟಕ ಪೊಲೀಸರಿಗೆ ಹಸ್ತಾಂತರಿಸುವಾಗ ಪೂಜಾರಿ ವಿರುದ್ಧ ಕರ್ನಾಟಕದಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿ ಮಾತ್ರ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡಿದ್ದಾರೆಂದು ವಿದೇಶಾಂಗ ಸಚಿವಾಲಯದಿಂದ ಬರೆದ ಪತ್ರದಲ್ಲಿ ಉಲ್ಲೇಖವಾಗಿದೆ.
ಮಹಾರಾಷ್ಟ್ರ, ಗುಜರಾತ್ ಮತ್ತು ಕೇರಳ ಸೇರಿದಂತೆ ಇತರ ರಾಜ್ಯಗಳಲ್ಲಿ ಪೂಜಾರಿ ವಿರುದ್ಧ ದಾಖಲಾದ ಪ್ರಕರಣಗಳಿಗೆ ಸಂಬಂಧಿಸಿದಂತೆ ಈಗ ಸೆನೆಗಲ್ ಅಧಿಕಾರಿಗಳಿಂದ ಸ್ಪಷ್ಟನೆ ಕೋರಲಾಗಿದೆ.
ಮುಂಬೈನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, “ಈ ಹಿಂದೆ, ಪೂಜಾರಿ ವಿರುದ್ಧ ಮುಂಬೈಯಲ್ಲಿ ದಾಖಲಾದ ಸುಮಾರು 10 ಪ್ರಕರಣಗಳಲ್ಲಿ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡಲಾಗಿದೆ ಎಂದು ಎಂಇಎ ಮೂಲಕ ನಮಗೆ ತಿಳಿಸಲಾಯಿತು ಆದಾಗ್ಯೂ ಇತ್ತೀಚೆಗೆ ನಾವು ಮತ್ತೊಮ್ಮೆ ಸ್ಪಷ್ಟೀಕರಣವನ್ನು ಕೋರಿದಾಗ, ಹಸ್ತಾಂತರ ಆದೇಶದ ಪ್ರಕಾರ ಕರ್ನಾಟಕದಲ್ಲಿ ನೋಂದಾಯಿಸಲಾದ ಕೆಲವು ಪ್ರಕರಣಗಳಲ್ಲಿ ಮಾತ್ರ ಆತನನ್ನು ವಿಚಾರಣೆಗೆ ಒಳಪಡಿಸಲು ಅನುಮತಿ ಇದೆ ಎಂದು ತಿಳಿಸುವ ಪತ್ರವೊಂದನ್ನು ನಾವು ಸ್ವೀಕರಿಸಿದ್ದೇವೆ. ಮುಂಬೈನಲ್ಲಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ನಾವು ಅನುಮತಿ ಪಡೆಯುವ ಪ್ರಕ್ರಿಯೆಯಲ್ಲಿದ್ದೆವು. ” ಪೂಜಾರಿ ವಿರುದ್ಧ ಕಾನೂನು ಕ್ರಮ ಜರುಗಿಸಬಹುದಾದ ಪ್ರಕರಣಗಳ ಬಗ್ಗೆ ಕೇಂದ್ರ ಸರ್ಕಾರ ಈಗ ಸ್ಪಷ್ಟನೆ ಕೋರಿದೆ. ಇತರ ಪ್ರಕರಣಗಳಲ್ಲಿಯೂ ಆತನನ್ನು ವಿಚಾರಣೆಗೆ ಒಳಪಡಿಸಲು ಸರ್ಕಾರ ಅನುಮತಿ ಪಡೆಯಬಹುದು.
ಕೃಪೆ :ಇಂಡಿಯನ್ ಎಕ್ಸ್ ಪ್ರೆಸ್