
ಉಡುಪಿ ನ. 24 : ಉಡುಪಿ ವಿಧಾನಸಭಾ ಕ್ಷೇತ್ರದ ಬ್ರಹ್ಮಾವರ ತಾಲೂಕು ವ್ಯಾಪ್ತಿಯ ಒಟ್ಟು 26 ಫಲಾನುಭವಿಗಳಿಗೆ 94/CC ಅಡಿಯಲ್ಲಿ ಖಾಯಂ ನಿವೇಶನ ಹಕ್ಕುಪತ್ರವನ್ನು ಶಾಸಕ ಶ್ರೀ ಕೆ. ರಘುಪತಿ ಭಟ್ ಇಂದು ಬ್ರಹ್ಮಾವರದ ಶಾಸಕರ ಕಚೇರಿಯಲ್ಲಿ ವಿತರಿಸಿದರು.
ಸುಮಾರು ಇಪ್ಪತ್ತು ವರ್ಷಗಳಿಂದ ವಾಸವಾಗಿರುವ ಬೈಕಾಡಿ ಗ್ರಾಮದ 22 ಕುಟುಂಬಗಳ ಫಲಾನುಭವಿ ಗಳು, ಹೇರೂರು ಗ್ರಾಮದ 2 ಫಲಾನುಭವಿಗಳು, 38ನೇ ಕಳ್ತೂರು ಗ್ರಾಮದ 1 ಫಲಾನುಭವಿ, ಹೊಸೂರು ಗ್ರಾಮದ 1 ಫಲಾನುಭವಿ ಸೇರಿದಂತೆ 26 ಕುಟುಂಬಗಳಿಗೆ 94/CC ಅಡಿಯಲ್ಲಿ ಖಾಯಂ ನಿವೇಶನ ಹಕ್ಕುಪತ್ರವನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಬ್ರಹ್ಮಾವರ ತಾಲೂಕು ಪಂಚಾಯತ್ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷರಾದ ವಸಂತಿ ಬೈಕಾಡಿ, ಬ್ರಹ್ಮಾವರ ತಹಶೀಲ್ದಾರ್ ಕಿರಣ್ ಗೋರಯ್ಯ, ಕಂದಾಯ ನಿರೀಕ್ಷಕ ಲಕ್ಷ್ಮೀನಾರಾಯಣ ಭಟ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.