ರಾಜ್ಯ
ಕಸ್ತೂರಿ ರಂಗನ್ ವರದಿ ಜಾರಿ ಮಾಡಲು ಅವಕಾಶ ನೀಡುವುದಿಲ್ಲ: ಸಿಎಂ ಬಿಎಸ್ ವೈ

ಬೆಂಗಳೂರು: ಕಸ್ತೂರಿ ರಂಗನ್ ವರದಿ ಜಾರಿ ಮಾಡಲು ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ರಾಜ್ಯ ರೈತ ಮೋರ್ಚಾ ಕಾರ್ಯಕಾರಿಣಿಯಲ್ಲಿ ಮಾತನಾಡಿ, ಎಲ್ಲೆಲ್ಲಿ ಕಸ್ತೂರಿ ರಂಗನ್ ವರದಿಯಿಂದ ರೈತರಿಗೆ ತೊಂದರೆಯಾಗುತ್ತದೆಯೋ ಅಲ್ಲೆಲ್ಲೂ ಅದು ಜಾರಿಯಾಗಲು ಬಿಡುವುದಿಲ್ಲ. ಯಾರಿಗೂ ಅನ್ಯಾಯವಾಗಲು ಬಿಡುವುದಿಲ್ಲ ಎಂದರು.
ಜತೆಗೆ, ರೈತರ ಪ್ರತಿಭಟನೆ ಹಿಂದೆ ಕಾಂಗ್ರೆಸ್ ಷಡ್ಯಂತ್ರ ವಿದೆ. ಪಕ್ಷದ ಕಾರ್ಯಕರ್ತರು ಸರಕಾರಗಳ ಜನಪರ ಅಭಿವೃದ್ಧಿ ಯೋಜನೆಗಳ ಬಗ್ಗೆ ತಿಳಿಸುವ ಮೂಲಕ ಈ ಷಡ್ಯಂತ್ರಕ್ಕೆ ತಕ್ಕ ಉತ್ತರ ನೀಡಬೇಕಿದೆ ಎಂದರು.