ಕರಾವಳಿ

ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ಉಡುಪಿ ಜಿಲ್ಲೆ, ಕುಂದಾಪುರ/ ಬೈಂದೂರು ತಾಲೂಕು ಘಟಕದ ಮಾಸಿಕ ಸಭೆ

ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ಉಡುಪಿ ಜಿಲ್ಲೆ, ಕುಂದಾಪುರ/ ಬೈಂದೂರು ತಾಲೂಕು ಘಟಕದ ಮಾಸಿಕ ಸಭೆಯು ಕುಂದಾಪುರದ ಕಚೇರಿಯಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಅಧ್ಯಕ್ಷರಾದ ಅಬ್ದುಲ್ ಸಲಾಂ ಚಿತ್ತೂರು ವಹಿಸಿದ್ದರು, ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿದ್ದ ಶಿವಮೊಗ್ಗ ಜಿಲ್ಲಾ ಎಸ್ಡಿಎಂಸಿ ಸಮನ್ವಯ ವೇದಿಕೆಯ ಪ್ರಭಾರ ಜಿಲ್ಲಾಧ್ಯಕ್ಷರಾದ ಅಶ್ವಿನಿ ಕುಮಾರ್,ಆರ್ಥಿಕ ಪರಿಸ್ಥಿತಿಯ ಹೊಡೆತಕ್ಕೆ ಜರ್ಜರಿತ ಗೊಂಡ ಕೆಲವೊಂದು ಖಾಸಗಿ ಶಾಲೆಯ ಪೋಷಕರು ಸರ್ಕಾರಿ ಶಾಲೆಗಳತ್ತ ತಮ್ಮ ಮಕ್ಕಳನ್ನು ಕರೆತಂದು ದಾಖಲಿಸಿರುವುದು ಒಂದು ಒಳ್ಳೆಯ ಬೆಳವಣಿಗೆಯಾಗಿದ್ದು ಇಂತಹ ಸಂದರ್ಭದಲ್ಲಿ ಎಸ್ಡಿಎಂಸಿ ಸಮನ್ವಯ ವೇದಿಕೆಯು ಸರಕಾರಿ ಶಾಲೆ ಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಿ ಆ ದಿಸೆಯಲ್ಲಿ ಕಾರ್ಯೋನ್ಮುಖರಾಗಿ ಖಾಸಗಿ ಶಾಲೆಗಳಿಂದ ಬಂದಂತಹ ಪೋಷಕರು /ವಿದ್ಯಾರ್ಥಿಗಳನ್ನು ಇಲ್ಲಿಯೇ ಉಳಿಸಿಕೊಳ್ಳುವಂತೆ ಪ್ರಯತ್ನಿಸುವ ಮೂಲಕ ರಾಜ್ಯದಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ಕಾರ್ಯ ಇನ್ನಷ್ಟು ಚುರುಕು ಕೊಳ್ಳಬೇಕಾಗಿದ್ದು ಆ ನಿಟ್ಟಿನಲ್ಲಿ ಉಡುಪಿ ಜಿಲ್ಲಾ ಎಸ್ಡಿಎಂಸಿ ಸಮನ್ವಯ ವೇದಿಕೆ ಬಹಳ ಉತ್ತಮ ಕೆಲಸದೊಂದಿಗೆ ರಾಜ್ಯಕ್ಕೆ ಮಾದರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಈ ತಿಂಗಳಲ್ಲಿ ತಮ್ಮ ಜನ್ಮದಿನಾಚರಣೆಯನ್ನು ಆಚರಿಸಿಕೊಳ್ಳುತ್ತಿರುವ ಬೈಂದೂರು ತಾಲೂಕು ಘಟಕದ ಅಧ್ಯಕ್ಷರಾದ ಅವನೀಶ ಹೊಳ್ಳ ದಂಪತಿಗಳನ್ನು ಸಮನ್ವಯ ವೇದಿಕೆಯ ವತಿಯಿಂದ ಗೌರವಿಸಿ ಅಭಿನಂದಿಸ ಲಾಯಿತು, ಗೌರವದ ಅಭಿನಂದನೆ ಸ್ವೀಕರಿಸಿದ ಅವನೀಶ ಹೊಳ್ಳರು ತಮ್ಮ ಜನ್ಮದಿನದ ಉಡುಗೊರೆಯಾಗಿ ಬೈಂದೂರು/ ಕುಂದಾಪುರ ಘಟಕದ ಸಂಪನ್ಮೂಲ ವ್ಯಕ್ತಿಗಳಿಗೆ ಸಮವಸ್ತ್ರ ಗಳನ್ನು ನೀಡಿದರು, ಕೆನರಾ ಬ್ಯಾಂಕ್ ಪ್ರವರ್ತಿತ ಅಮೂಲ್ಯ ಆರ್ಥಿಕ ಸಾಕ್ಷರತಾ ಕೇಂದ್ರದ ವತಿಯಿಂದ ಬೇಕಿಂಗ್ ವ್ಯವಹಾರದಲ್ಲಿ ಡಿಜಿಟಲ್ ಸಾಕ್ಷರತೆಯ ವಿಚಾರದೊಂದಿಗೆ ಇತ್ತೀಚೆಗೆ ಅಲ್ಲಲ್ಲಿ ನಡೆಯುತ್ತಿರುವ ಬ್ಯಾಂಕ್ ಅಕ್ರಮ ವಂಚನೆಗಳಿಂದ ಜನರು ಪಡುತ್ತಿರುವ ತೊಂದರೆಗಳಿಗೆ ಮಾಹಿತಿ ನೀಡಿ ಜಾಗೃತಿ ಮೂಡಿಸಲಾಯಿತು ಕುಂದಾಪುರ ತಾಲೂಕು ಘಟಕದ ಅಧ್ಯಕ್ಷರಾದ ಎಸ್ ವಿ ನಾಗರಾಜ್ ರವರು ಪ್ರಾಸ್ತಾವಿಕವಾಗಿ ಮಾತನಾಡಿ ಮುಂದಿನ ದಿನಗಳಲ್ಲಿ ಸದಸ್ಯರಿಗೆ ಸಾಮರ್ಥ್ಯ ವರ್ಧನ ಶಿಬಿರಗಳನ್ನು ಏರ್ಪಡಿಸಿ ಎಸ್ಡಿಎಂಸಿ ಗಳನ್ನು ಬಲ ಪಡಿಸುವುದಕ್ಕಾಗಿ ಸಂಪನ್ಮೂಲ ವ್ಯಕ್ತಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿ ಕಾರ್ಯಕ್ರಮವನ್ನು ನಿರ್ವಹಿಸಿದರು, ತಾಲೂಕು ಕಾರ್ಯದರ್ಶಿ ಜ್ಯೋತಿ ಶೆಟ್ಟಿ ಸ್ವಾಗತಿಸಿ ಹರಿಶ್ಚಂದ್ರ ಆಚಾರ್ಯ ಧನ್ಯವಾದ ಅರ್ಪಿಸಿದರು , ಬಾರ್ಕೂರು ಸರಕಾರಿ ಕಾಲೇಜಿನ ಎಂ ಎಸ್ ಡಬ್ಲ್ಯೂ ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಸಹಕರಿಸಿದರು.

Leave a Reply

Your email address will not be published. Required fields are marked *

Back to top button
error: Content is protected !!

Adblock Detected

Please consider supporting us by disabling your ad blocker