ಕರಾವಳಿ

ಉಡುಪಿ: ಜೋತಿಷ್ಯ ಹೇಳುವ ನೆಪದಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಮಹಿಳೆ

ಉಡುಪಿ: ಜೋತಿಷ್ಯ ಹೇಳುವ ನೆಪದಲ್ಲಿ ಮನೆಗೆ ಬಂದ ಮಹಿಳೆಯೊಬ್ಬರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿಕೊಂಡು ಹೋಗಿರುವ ಘಟನೆ ಇಂದು ಬೆಳಿಗ್ಗೆ ನಿಟ್ಟೂರು ರಾಜೀವನಗರ ಎಂಬಲ್ಲಿ ನಡೆದಿದೆ.

ರಾಜೀವನಗರದ ನಿವಾಸಿ ಲಕ್ಷ್ಮಿ(55) ಎಂಬವರು ಚಿನ್ನಾಭರಣ ಹಾಗೂ ನಗದು ಕಳೆದುಕೊಂಡವರು. ಇವರ ಮನೆಗೆ ಸುಮಾರು 30 ವರ್ಷದ ಪ್ರಾಯದ ಅಪರಿಚಿತ ಮಹಿಳೆ ಬಂದು ಜೋತಿಷ್ಯ ಹೇಳುವುದಾಗಿ ನಂಬಿಸಿದಳು. ಅಲ್ಲದೆ, ನಿಮ್ಮ ಮನೆಗೆ ಮಾಟ ಮಾಡಿದ್ದಾರೆ. ಅದರ ಪರಿಹಾರಕ್ಕೆ ಲಕ್ಷ್ಮಿ ಪೂಜೆ ಮಾಡಿಸುತ್ತೇನೆ ಎಂದು ಹೇಳಿದ ಆಕೆ, ಪೂಜೆಗಾಗಿ ಮನೆಯಲ್ಲಿದ್ದ ಎಲ್ಲಾ ಚಿನ್ನಾಭರಣ ಹಾಗೂ ಹಣವನ್ನು ತರುವಂತೆ ಸೂಚಿಸಿದಳು.

ಅದರಂತೆ ಲಕ್ಷ್ಮಿ ಎಲ್ಲಾ ಚಿನ್ನಾಭರಣಗಳನ್ನು ಮತ್ತು ₹ 15 ಸಾವಿರ ನಗದನ್ನು ಬಾಕ್ಸ್‌ನಲ್ಲಿ ಹಾಕಿ ಕೊಟ್ಟಿದ್ದರು. ಅಪರಿಚಿತ ಮಹಿಳೆ, ಪೂಜೆ ಮುಗಿಸಿ ಬಾಕ್ಸ್ ವಾಪಾಸು ಕೊಟ್ಟು ಅಲ್ಲಿಂದ ಹೋದರು. ನಂತರ ಲಕ್ಷ್ಮಿ ಬಾಕ್ಸ್ ತೆಗೆದು ನೋಡುವಾಗ ಚಿನ್ನಾಭರಣಗಳು ಮತ್ತು ನಗದು ಹಣ ಇಲ್ಲದಿರುವಾಗ ಮೋಸ ಹೋದದ್ದು ಗಮನಕ್ಕೆ ಬಂದಿದೆ. ಆಕೆ ₹ 7.36 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು 15 ಸಾವಿರ ನಗದು ದೋಚಿದ್ದಾಳೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!