ರಾಜ್ಯ
ಬೆಂಗಳೂರು : ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಗಾಂಜಾ ಸಾಗಾಟ ಬಿಎಂಟಿಸಿ ಬಸ್ ಡ್ರೈವರ್, ಕಂಡಕ್ಟರ್ ಅರೆಸ್ಟ್..!

ಬೆಂಗಳೂರು : ಕೆಎಸ್‌ಆರ್‌ಟಿಸಿ ಬಸ್ಸುಗಳಲ್ಲಿ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಬಿಎಂಟಿಸಿ ಬಸ್ ಡ್ರೈವರ್ ಹಾಗೂ ನಿರ್ವಾಹಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ವಿಠಲ್ ಭಜಂತ್ರಿ, ಶರಣ ಬಸಪ್ಪ ಎಂಬವರೇ ಬಂಧಿತ ಆರೋಪಿಗಳಾಗಿದ್ದಾರೆ. ವಿಜಯಪುರ ಮತ್ತು ಕಲಬುರಗಿಯಿಂದ ಗಾಂಜಾವನ್ನು ತಂದು ಬೆಂಗಳೂರಿನ ಕೆಂಗೇರಿ ಬಳಿಯ ತುರಹಳ್ಳಿ ಅರಣ್ಯ ಪ್ರದೇಶದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದರು. ಕಳೆದ ಮೂರು ವರ್ಷಗಳಿಂದಲೂ ಈ ಕೃತ್ಯವನ್ನು ನಡೆಸುತ್ತಿದ್ದ ಎಂದು ತಿಳಿದುಬಂದಿದೆ.
ಬಂಧಿತರಿಂದ ಸುಮಾರು ೯.೮೦೦ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸರಕಾರಿ ಬಸ್ಸುಗಳನ್ನು ದುರ್ಬಳಕೆ ಮಾಡಿಕೊಂಡು ಆರೋಪಿಗಳು ಈ ಕೃತ್ಯವನ್ನು ಎಸಗುತ್ತಿದ್ದರು. ಇದೀಗ ಕೆಂಗೇರಿ ಠಾಣೆಯ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದು, ತನಿಖೆ ಚುರುಕುಗೊಳಿಸಿದ್ದಾರೆ.