ಕಾರು ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತ : ಯುವಕನೊಬ್ಬ ಸ್ಥಳದಲ್ಲೇ ಸಾವು

ಹಿರಿಯಡ್ಕ : ಉಡುಪಿ ಜಿಲ್ಲೆಯ ಹಿರಿಯಡ್ಕ ಕಾರು ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಹಿರಿಯಡ್ಕ ಸರ್ಕಾರಿ ಪದವಿಪೂರ್ವ ಕಾಲೇಜಿನ ಬಳಿ ಸಂಭವಿಸಿದೆ.
ಮೃತ ಯುವಕನನ್ನು ಹಿರಿಯಡ್ಕ ಸಮೀಪದ ಪುತ್ತಿಗೆ ನಿವಾಸಿ 18ವರ್ಷ ಪ್ರಾಯ ಸ್ಟ್ಯಾಲಿನ್ ಎಂದು ಗುರುತಿಸಲಾಗಿದೆ. ಈತ ಮಧ್ಯಾಹ್ನ ಹಿರಿಯಡ್ಕ ಪೇಟೆಯಿಂದ ಪುತ್ತಿಗೆ ಕಡೆಗೆ ಹೋಗುತ್ತಿದ್ದನು. ಈ ವೇಳೆ ಎದುರಿನಿಂದ ಬಂದ ಸ್ಕೋಡಾ ಕಾರೊಂದು ಡಿಕ್ಕಿಯಾಗಿದೆ. ಇದರಿಂದ ಬೈಕ್ ಸಮೇತ ರಸ್ತೆಗೆ ಬಿದ್ದ ಸ್ಟ್ಯಾ ಲಿನ್ ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲೇ ಮೃತ ಪಟ್ಟಿರುವುದಾಗಿ ತಿಳಿಯಲಾಗಿದೆ.
ಅಪಘಾತದ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಇದೇ ಸಂದರ್ಭದಲ್ಲಿ ಸ್ಟ್ಯಾಲಿನ್ ನ ಹಿಂದಿನಿಂದ ಬರುತ್ತಿದ್ದ ಇಕೋ ಸ್ಪೋರ್ಟ್ಸ್ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬಡಿದು, ರಸ್ತೆಯ ಬದಿಯ ಪೊದೆಗೆ ನುಗ್ಗಿದೆ ಎನ್ನಲಾಗಿದೆ. ಪೊಲೀಸರು ಸ್ಥಳಕ್ಕಾಗಿಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಪೊಲೀಸರು ತನಿಖೆ ನಡೆಸುತ್ತಿದ್ದಾರೆ.