
ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆ ಕಾಣುತ್ತಿದೆ. ಇಂದು 135 ಜನರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 65684 ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ 229 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ.
ಆ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 63789 ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿನಿಂದ ಇಂದು 4 ಜನ ಸಾವನಪ್ಪಿದ್ದು ಒಟ್ಟು ಸಾವಿನ ಸಂಖ್ಯೆ 378 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 1517 ಸಕ್ರಿಯ ಪ್ರಕರಣಗಳಿವೆ.