
ಉಡುಪಿ: ಸಾರ್ವಜನಿಕರು ದಿನನಿತ್ಯದ ಅಗತ್ಯ ದಿನಸಿ ವಸ್ತುಗಳು, ತರಕಾರಿ, ಮತ್ತು ಮೀನು ಖರೀದಿಗೆ ತಮ್ಮ ಮನೆಯ ಸಮೀಪದ ಅಂಗಡಿಗಳಲ್ಲಿ ಖರೀದಿಸಬೇಕು. ಅನಗತ್ಯವಾಗಿ ವಾಹನಗಳಲ್ಲಿ ಬಂದು ವಸ್ತುಗಳನ್ನು ಖರೀದಿಸಿದರೆ ವಾಹನಗಳನ್ನು ಸೀಜ್ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಜಗದೀಶ್ ಸೂಚನೆ ನೀಡಿದ್ದಾರೆ.
ಈ ಕುರಿತಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.