
ಕುಂದಾಪುರ : ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಆ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಶಾಸ್ತ್ರಿ ಸರ್ಕಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 66 ಫ್ಲೈ ಓವರ್ ರಸ್ತೆಯಲ್ಲಿ ಸೋಮವಾರ ರಾತ್ರಿ ನಡೆದಿದೆ.
ವಾಹನವು ತಲ್ಲೂರು ಕಡೆಯಿಂದ ಉಡುಪಿ ಕಡೆಗೆ ಅತೀ ವೇಗ ಹಾಗೂ ನಿರ್ಲಕ್ಷ್ಯತನದಿಂದ ಚಾಲನೆ ಮಾಡಿಕೊಂಡು ಬಂದು, ರಸ್ತೆ ದಾಟುತ್ತಿದ್ದ 70 ವರ್ಷ ಪ್ರಾಯದ ಅಪರಿಚಿತ ವೃದ್ಧರಿಗೆ ಡಿಕ್ಕಿ ಹೊಡೆದುದರಿಂದ ಅಪಘಾತ ಸಂಭವಿಸಿತ್ತು.
ಅಪಘಾತದ ಬಳಿಕ ವಾಹನದ ಚಾಲಕ ನಿಲ್ಲಿಸದೆ ಉಡುಪಿ ಕಡೆಗೆ ಹೋಗಿರುತ್ತಾನೆ ಎಂದು ಸಂಚಾರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನಲ್ಲಿ ತಿಳಿಸಲಾಗಿದೆ.