ತಾಜಾ ಸುದ್ದಿಗಳು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನ್ ಲಾಕ್ ಬಗ್ಗೆ ನಾಳೆ ಅಧಿಕೃತ ಆದೇಶ : ಸಚಿವ ಕೋಟ ಶ್ರೀನಿವಾಸ ಪೂಜಾರಿ!!

ಬೆಳ್ತಂಗಡಿ: ದ.ಕ. ಜಿಲ್ಲೆಯಲ್ಲಿ ಕೊರೋನ ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್‌ಡೌನ್ ಸಡಿಲಿಕೆ ಮಾಡುವಂತೆ ಮುಖ್ಯಮಂತ್ರಿಯವರಲ್ಲಿ ವಿನಂತಿಸಲಾಗಿದೆ. ಗುರುವಾರ ಈ ಬಗ್ಗೆ ಸರಕಾರದ ಅಧಿಕೃತ ಆದೇಶ ಬರುವ ನಿರೀಕ್ಷೆಯಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಕೊಕ್ಕಡದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಚವರು, ಜಿಲ್ಲೆಯಲ್ಲಿ ಇದೀಗ ಕೊರೋನ ಪಾಸಿಟಿವಿಟಿ ರೇಟ್ ಐದರ ಕೆಳಗೆ ಬಂದಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಅಂಗಡಿಗಳನ್ನು ತೆರೆಯಲು ಹಾಗೂ ಬಸ್ಸುಗಳ ಸಂಚಾರಕ್ಕೆ ಅವಕಾಶ ನೀಡಿ ಲಾಕ್ಡೌನ್ ಸಡಿಲಿಕೆ ಮಾಡಲಾಗುವುದು. ಈ ಬಗ್ಗೆ ಈಗಾಗಲೆ ನಿರ್ಧಾರ ತೆಗೆದುಕೊಳ್ಳಲಾಗಿದ್ದು ಇಂದು ಸಂಜೆ ಅಥವಾ ಗುರುವಾರ ಅಧಿಕೃತ ಆದೇಶ ಹೊರಬೀಳಲಿದೆ ಎಂದು ಅವರು ತಿಳಿಸಿದರು.

Leave a Reply

Your email address will not be published. Required fields are marked *

Back to top button
error: Content is protected !!

Adblock Detected

Please consider supporting us by disabling your ad blocker