
ಬೆಂಗಳೂರು : ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗಿದ್ದ ಮುನಿರತ್ನ ಅವರು ಇದೀಗ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೆ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.
ರಾಜರಾಜೇಶ್ವರಿ ನಗರ ಕ್ಷೇತ್ರದ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಬಿಜೆಪಿ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದ ಮುನಿರತ್ನಗೆ ಇದೀಗ ಟಿಕೆಟ್ ಕೈತಪ್ಪುವ ಭೀತಿ ಎದುರಾಗಿದೆ ಎನ್ನಲಾಗಿದ್ದು, ಆರ್.ಆರ್. ನಗರ ಕ್ಷೇತ್ರದಿಂದ ಬಿಜೆಪಿಯಿಂದ ತುಳಸಿ ಮುನಿರಾಜುಗೌಡ ಅವರ ಹೆಸರನ್ನು ಕೇಂದ್ರ ಸಮಿತಿಗೆ ರಾಜ್ಯ ಬಿಜೆಪಿ ಶಿಫಾರಸು ಮಾಡಿದೆ ಎಂದು ಹೇಳಲಾಗುತ್ತಿದೆ.
ಒಂದು ವೇಳೆ ಮುನಿರತ್ನ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದರೆ ಜೆಡಿಎಸ್ ಸೇರ್ಪಡೆಯಾಗಿ ಆರ್.ಆರ್. ನಗರದಿಂದ ಜೆಡಿಎಸ್ ಆಭ್ಯರ್ಥಿಯಾಗಿ ಕಣಕ್ಕಿಳಿಯಲು ಮುನಿರತ್ನ ಬಿಗ್ ಪ್ಲ್ಯಾನ್ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.