
ಬೆಳಗಾವಿ: ಪ್ರೀತಿ ನಿರಾಕರಿಸಿದ ಕಾರಣಕ್ಕೆ 10 ನೇ ತರಗತಿಯಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಬೆಳಗಾವಿ ಜಿಲ್ಲೆಯ ರಾಯಭಾಗದಲ್ಲಿ ಈ ಘಟನೆ ಸಂಭವಿಸಿದೆ. ಆರೋಪಿಯನ್ನು ಅಮೀರ್ ಜಾಮ್ ದಾರ್ ಎಂದು ಗುರುತಿಸಲಾಗಿದೆ.
ಆರೋಪಿ, ವಿದ್ಯಾರ್ಥಿನಿಯೊಬ್ಬಳಿಗೆ ಪ್ರೀತಿಯ ಹೆಸರಿನ್ಲಲಿ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ವಿದ್ಯಾರ್ಥಿನಿ ಶಿಕ್ಷಕರ ಮನೆಯಿಂದ ಹಿಂತಿರುಗುತ್ತಿದ್ದ ವೇಳೆ, ಆರೋಪಿ ಚೂರಿಯಿಂದ ಇರಿದು ವಿದ್ಯಾರ್ಥಿನಿಯ ಹತ್ಯೆ ಮಾಡಿದ್ದಾನೆ.
ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.