ಕರಾವಳಿ

ಉಡುಪಿ ಜಿಲ್ಲೆಯಲ್ಲಿ ಇಂದು 652 ಕರೋನಾ ಪಾಸಿಟಿವ್

ಉಡುಪಿ: ಜಿಲ್ಲೆಯಲ್ಲಿ ಇಂದು 652 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿಯಲ್ಲಿ 355, ಕುಂದಾಪುರ 165, ಕಾರ್ಕಳ 130 ಹಾಗೂ ಹೊರ ಜಿಲ್ಲೆಯ 2 ಮಂದಿಯಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 58208 ಕೋವಿಡ್ ಸಕ್ರಿಯ ಪ್ರಕರಣಗಳಿವೆ.

ಇಂದು ಜಿಲ್ಲೆಯಲ್ಲಿ 4 ಮಂದಿ ಸೋಂಕಿತರು ಮೃತಪಟ್ಟಿದ್ದು, ಈ ಪೈಕಿ ಉಡುಪಿಯ ಓರ್ವ ವ್ಯಕ್ತಿ ಹಾಗೂ ಕುಂದಾಪುರದ ಓರ್ವ ವ್ಯಕ್ತಿ ಹಾಗೂ ಇಬ್ಬರು ಮಹಿಳೆಯರು ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದಾರೆ.

ಮೇ. 29 ರಂದು ಜಿಲ್ಲೆಯಲ್ಲಿ 1081 ಮಂದಿ ಸೋಂಕಿತರು ಆಸ್ಪತ್ರೆಯಿಂದ ಗುಣಮುಖರಾಗಿ ಹೊರ ಬಂದಿದ್ದು, ಈ ವರೆಗೆ ಒಟ್ಟು 52,537 ಮಂದಿ ಗುಣಮುಖರಾಗಿದ್ದಾರೆ.

ಮೇ. 29 ರ ವೇಳೆಗೆ ಜಿಲ್ಲೆಯಲ್ಲಿ ಒಟ್ಟು 5,89590 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 58208 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈ ವರೆಗೆ ಜಿಲ್ಲೆಯಲ್ಲಿ ಒಟ್ಟು 329 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!