ಕರಾವಳಿ
ಉಡುಪಿ ಜಿಲ್ಲೆ: 519 ಪಾಸಿಟಿವ್, 765 ಗುಣಮುಖ

ಉಡುಪಿ ಜಿಲ್ಲೆಯಲ್ಲಿ 519 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು- 231, ಕುಂದಾಪುರ- 174, ಕಾರ್ಕಳ- 113 ಮತ್ತು ಹೊರ ಜಿಲ್ಲೆಯ ಓರ್ವ ವ್ಯಕ್ತಿ ಸೋಂಕಿಗೆ ಒಳಗಾಗಿದ್ದಾರೆ. 765 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 53302 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಜಿಲ್ಲೆಯಲ್ಲಿ 5092 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ 4 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 333 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಮೇ 30 ರಂದು 2879 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 592469 ಮಂದಿಯನ್ನು ಪರೀಕ್ಷಿಸಲಾಗಿದೆ.