ಕರಾವಳಿ
ಜೂನ್ 2ರಿಂದ ಉಡುಪಿಯಲ್ಲಿ ಈ ಗ್ರಾಮಗಳೆಲ್ಲಾ ಸಂಪೂರ್ಣ ಲಾಕ್ ಡೌನ್ ಆಗಲಿದೆ

ಉಡುಪಿ : ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು 50 ಕ್ಕಿಂತ ಹೆಚ್ಚು ಪಾಸಿಟಿವ್ ಪ್ರಕರಣಗಳಿರುವ ಗ್ರಾಮಗಳನ್ನು ಸಂಪೂರ್ಣ ಲಾಕ್ ಡೌನ್ ಮಾಡಲು ಜಿಲ್ಲಾಡಳಿತ ನಿರ್ಧರಿಸಿದೆ.
ಅದರಂತೆ ಜಿಲ್ಲೆಯಲ್ಲಿ ಪ್ರಸ್ತುತ 35 ಗ್ರಾ.ಪಂ.ಗಳಲ್ಲಿ 50 ಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿದ್ದು ಜೂನ್ 2 ರಿಂದ ಈ ಎಲ್ಲಾ ಗ್ರಾಮಗಳು ಸಂಪೂರ್ಣ ಲಾಕ್ ಡೌನ್ ಆಗಲಿದೆ. ಶಿರೂರು , ಜಡ್ಕಲ್ , ಕಂಬದಕೋಣೆ, ನಾಡ, ಕಾವ್ರಾಡಿ, ಹೊಂಬಾಡಿ ಮಂಡಾಡಿ, ಕೋಟೇಶ್ವರ, ಹಾಲಾಡಿ, ಇಡೂರು ಕುಂಜ್ಞಾಡಿ, ಆಜ್ರಿ, ಆಲೂರು, 38 ಕಳತ್ತೂರು, 80 ಬಡಗಬೆಟ್ಟು, ಅಲೆವೂರು, ಪೆರ್ಡೂರು, ತೆಂಕನಿಡಿಯೂರು, ಬೊಮ್ಮರಬೆಟ್ಟು, ಬೆಳಪು, ಬೆಳ್ಳೆ, ಪಡುಬಿದ್ರಿ, ಶಿರ್ವ, ಮಾಳ, ಈದು, ಕುಕ್ಕುಂದೂರು, ಕಡ್ತಲ, ಮರ್ಣೆ, ಪಳ್ಳಿ, ನಿಟ್ಟೆ, ಮಿಯಾರು, ಬೆಳ್ಮಣ್, ಬೆಳ್ವೆ, ಮುದ್ರಾಡಿ, ವರಂಗ ಇಷ್ಟು ಗ್ರಾಮಗಳು ಬುಧವಾರದಿಂದ ಸಂಪೂರ್ಣ ಲಾಕ್ ಡೌನ್ ಆಗಲಿದೆ .