
ಕಾಶ್ಮೀರ: ಬಿಜೆಪಿ ನಾಯಕ, ಮುನ್ಸಿಪಲ್ ಕೌನ್ಸಿಲರ್ ರಾಕೇಶ್ ಪಂಡಿತ್ ಮೂವರು ಅಪರಿಚಿತರ ಗುಂಡಿಗೆ ಬಲಿಯಾಗಿದ್ದಾರೆ.
ಪುಲ್ವಾಮಾ ಜಿಲ್ಲೆಯ ತ್ರಾಲ್ ಪ್ರದೇಶದ ಪಯೀನ್ ಪಟ್ಟಣದ ಬಳಿ ಬುಧವಾರ (ಜೂ.2) ಸಂಜೆ ಈ ದುರ್ಘಟನೆ ನಡೆದಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಪಂಡಿತ್ ಅವರು ಕೊನೆಯುಸಿರೆಳೆದರು.
ಘಟನೆಯಲ್ಲಿ ಪಂಡಿತ್ ಜತೆಗಿದ್ದ ಸ್ನೇಹಿತನ ಮಗಳ ಕಾಲಿಗೆ ಗುಂಡು ತಗುಲಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಗಳಿಗಾಗಿ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ ಎಂದು ತಿಳಿದುಬಂದಿದೆ.