ಉಡುಪಿ: ಮತ್ತೆ ಏಳು ಗ್ರಾಮಗಳು ಲಾಕ್!

ಉಡುಪಿ : ಜಿಲ್ಲೆಯಲ್ಲಿ ಮತ್ತೆ 7 ಗ್ರಾಮ ಪಂಚಾಯತ್ ಗಳನ್ನು ಜೂ.5 ರಿಂದ ಎರಡು ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಮಾಡಲು ಜಿಲ್ಲಾಡಳಿತ ಆದೇಶಿಸಿದೆ.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಕಟಣೆ ಹೊರಡಿಸಿದ್ದು,ಕೋವಿಡ್ ನಿಯಂತ್ರಿಸುವ ಸಲುವಾಗಿ ಈಗಾಗಲೇ 50 ಕ್ಕೂ ಹೆಚ್ಚು ಕೋವಿಡ್ ಪಾಸಿಟಿವ್ ಪ್ರಕರಣಗಳು ಇರುವ ಜಿಲ್ಲೆಯ 35 ಗ್ರಾಮ ಪಂಚಾಯತ್ ಗಳನ್ನು ಈಗಾಗಲೇ ಸಂಪೂರ್ಣ ಲಾಕ್ ಡೌನ್ ಮಾಡಲಾಗಿದೆ.
ಇದೀಗ ಮತ್ತೆ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ, ಆವರ್ಸೆ, ಹನೆಹಳ್ಳಿ ಗ್ರಾಮ ಪಂಚಾಯತ್ ಹಾಗೂ ಕುಂದಾಪುರ ತಾಲೂಕಿನ ತಲ್ಲೂರು, ಯಡಮೊಗೆ, ಕರ್ಕುಂಜೆ ಗ್ರಾಮ ಪಂಚಾಯತ್ ಮತ್ತು ಕಾರ್ಕಳ ತಾಲೂಕಿನ ಕಲ್ಯ ಗ್ರಾಮ ಪಂಚಾಯತ್ ಗಳನ್ನು ಸಂಪೂರ್ಣ ಲಾಕ್ ಡೌನ್ ಮಾಡಿ ಆದೇಶಿಸಲಾಗಿದೆ. ಅದರಂತೆ ಈ ಗ್ರಾಮ ಪಂಚಾಯತ್ ಗಳು ಜೂ.5 ರ ಬೆಳಿಗ್ಗೆ 6 ರಿಂದ ಜೂನ್ 7 ರ ಬೆಳಿಗ್ಗೆ 6 ಗಂಟೆ ವರೆಗೆ ಸಂಪೂರ್ಣ ಲಾಕ್ ಡೌನ್ ಆಗಿರಲಿದೆ ಎಂದು ತಿಳಿಸಿದ್ದಾರೆ. ಜೂ.4 ರಂದು ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಮಾಡಿಕೊಡಲಾಗಿದೆ. ಹಾಗಾಗಿ ಸಾರ್ವಜನಿಕರು ನಾಳೆ ಅಗತ್ಯ ವಸ್ತುಗಳನ್ನು ಖರೀದಿ ಮಾಡಬಹುದಾಗಿದೆ ಎಂದು ತಿಳಿದು ಬಂದಿದೆ.
ಇನ್ನು ಜೂ.5 ರ ನಂತರ ಎರಡು ದಿನಗಳು ಈ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತುರ್ತು ಆರೋಗ್ಯ ಸೇವೆ ಹೊರತು ಪಡಿಸಿ ಅಂಗಡಿ ಮುಂಗಟ್ಟುಗಳು ಹಾಗೂ ಸಾರ್ವಜನಿಕ ಸಂಚಾರ ಅವಕಾಶವಿರುವುದಿಲ್ಲ.