
ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದವರಿಗೆ ಮೊದಲ ಸಲ 1000 ರೂ. ದಂಡ, 3 ನೇ ಬಾರಿ ಸಿಕ್ಕಿಬಿದ್ದರೆ 1000 ರೂ. ದಂಡದ ಜೊತೆಗೆ 1 ವರ್ಷ ಜೈಲು ಶಿಕ್ಷೆ ವಿಧಿಸುವಂತಹ ಕಠಿಣ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.ಈ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರು ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಜೊತೆ ಚರ್ಚಿಸಲಿದ್ದು, ಅಧಿಕೃತ ಪ್ರಕಟಣೆ ಹೊರಬೀಳುವ ಸಾಧ್ಯತೆ ಇದೆ.
ಈ ಬಗ್ಗೆ ಮಾತನಾಡಿರುವ ಸುಧಾಕರ್ ಅವರು, ಅನ್ ಲಾಕ್ ನಂತರದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿವೆ.
ಸೋಂಕಿನ ಕುರಿತು ರಾಜ್ಯ ಸರ್ಕಾರವು ಎಷ್ಟೇ ಜಾಗೃತಿ ಮೂಡಿಸಿದರೂ ಸಾರ್ವಜನಿಕರು ಸೂಚನೆಗಳನ್ನು ಪಾಲಿಸದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಕೂಡಲೇ ಕಠಿಣ ಕಾನೂನು ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.