
ವಾಹನ ಶೋ ರೂಂ ಹೊರತುಪಡಿಸಿ ಎಲ್ಲಾ ಗ್ಯಾರೆಜ್ ಗಳು ಹಾಗೂ ಅಧಿಕೃತ ವಾಹನ ಸೇವಾ ಕೇಂದ್ರಗಳು,ಕನ್ನಡಕದ ಅಂಗಡಿಗಳನ್ನು ತೆರೆಯಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.
ಈ ಆದೇಶ ಜೂ ೧೨ ರಿಂದಲೇ ಅನ್ವಯ ಆಗಲಿದ್ದು ಬೆಳಿಗ್ಗೆ ೬ ರಿಂದ ೧೨ ರ ವರೆಗೆ ಕಾರ್ಯನಿರ್ವಹಿಸುವಂತೆ ಉಲ್ಲೇಖಿಸಲಾಗಿದ್ದು, ಪ್ರಸ್ತುತ ಜಾಲ್ತಿಯಲ್ಲಿರುವ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.
ಯಾವುದೇ ವ್ಯಕ್ತಿಗಳು ಈಗ ಜಾರಿಯಲ್ಲಿರುವ ಮಾರ್ಗಸೂಚಿಯನ್ನು ಉಲ್ಲಂಘಿಸಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.