
ಬೆಂಗಳೂರು : ರಾಜ್ಯ ಸರ್ಕಾರವು ಗ್ರಾಮಾಂತರ ಮತ್ತು ನಗರ ಪ್ರದೇಶಗಳ ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ಮನೆಗಳನ್ನು ನಿರ್ಮಿಸಿಕೊಂಡವರಿಗೆ ಸಿಹಿಸುದ್ದಿ ನೀಡಿದ್ದು, ಸರ್ಕಾರಿ ಜಮೀನುಗಳಲ್ಲಿ 2015 ರ ಜ.1 ಕ್ಕಿಂತ ಮೊದಲು ಅನಧಿಕೃತವಾಗಿ ನಿರ್ಮಿಸಿರುವ ಮನೆಗಳನ್ನು ಸಕ್ರಮಗೊಳಿಸುವ ಅವಕಾಶವನ್ನು 2022 ರ ಮಾರ್ಚ್ 31 ರವರೆಗೆ ವಿಸ್ತರಿಸಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಕಂದಾಯ ಸಚಿವ ಆರ್. ಅಶೋಕ್, ಕರ್ನಾಟಕ ಭೂಕಂದಾಯ ಕಾಯ್ದೆಯ ಕಲಂ 94 ಸಿ ಮತ್ತು 94 ಸಿಸಿ ಅಡಿಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಈ ಮೊದಲು ಅರ್ಜಿಗಳನ್ನು ಸ್ವೀಕರಿಸಲು 2019 ರ ಮಾರ್ಚ್ 31 ರವರೆಗೆ ನಿಗದಿಪಡಿಸಲಾಗಿತ್ತು. ಸದ್ಯಕ್ಕೆ 2022 ರ ಮಾರ್ಚ್ 31 ಕಾಲಾವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ಅನಧಿಕೃತವಾಗಿ ನಿರ್ಮಿಸಿರುವ ಮನೆಗಳನ್ನು ಸಕ್ರಮಗೊಳಿಸುವ ಅರ್ಜಿಗಳನ್ನು ಸ್ವೀಕರಿಸಿ, ದಾಖಲೆಗಳ ಪರಿಶೀಲನೆ ನಡೆಸಿದ ನಂತರ 2023ರ ಮಾರ್ಚ್ 31 ಹಕ್ಕುಪತ್ರ ವಿತರಿಸಲಾಗುತ್ತದೆ ಎಂದು ಹೇಳಿದ್ದಾರೆ.