
ರಾಜ್ಯದಲ್ಲಿ ಈ ವಾರದ ಕೊನೆಯವರೆಗೂ ಮಳೆ ದಿನಗಳು ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರೊಂದಿಗೆ ಬಂಗಾಳಕೊಲ್ಲಿಯಲ್ಲಿ ಒತ್ತಡ ಸೃಷ್ಟಿ ಕಾರಣವಾಗಿ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಬಹುದು ಎಂದು ಹೇಳಿದ್ದರು.
ಜುಲೈ 23ರಂದು ವಾಯವ್ಯ ಬಂಗಾಳಕೊಲ್ಲಿಯಲ್ಲಿ ಒತ್ತಡ ರೂಪುಗೊಳ್ಳುವ ಸಾಧ್ಯತೆಯಿದೆ. ಈ ಪ್ರಭಾವದಿಂದ ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ಜುಲೈ 20-24ರವರೆಗೂ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಬೆಂಗಳೂರಿನ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ. ಜುಲೈ 7ರ ನಂತರ ರಾಜ್ಯದಲ್ಲಿ ನೈಋತ್ಯ ಮುಂಗಾರು ಚುರುಕಾಗಿತ್ತು
ಕರಾವಳಿ ಜಿಲ್ಲೆಗಳಿಗೆ ಎಚ್ಚರಿಕೆ
ವಾಯವ್ಯ ಬಂಗಾಳಕೊಲ್ಲಿಯಲ್ಲಿ ಒತ್ತಡ ಸೃಷ್ಟಿ ಪ್ರಭಾವ ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ಗೋಚರಿಸಲಿದ್ದು, ಈ ಅವಧಿಯಲ್ಲಿ ಹೆಚ್ಚಿನ ಮಳೆಯಾಗಲಿದೆ. ಜುಲೈ 24ರವರೆಗೂ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ. ಆನಂತರ ಮಳೆ ಕ್ಷೀಣಿಸಬಹುದು ಎಂದು ಇಲಾಖೆ ಅಂದಾಜಿಸಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಿಗೆ ಮಳೆ ಎಚ್ಚರಿಕೆ ನೀಡಲಾಗಿದೆ.
ಯೆಲ್ಲೋ ಅಲರ್ಟ್ ಘೋಷಣೆ
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸೂಚನೆ ನೀಡಿದ್ದು, ಜುಲೈ 22ರವರೆಗೂ ಯೆಲ್ಲೂ ಅಲರ್ಟ್ ಘೋಷಣೆ ಮಾಡಲಾಗಿದೆ.