ಕರಾವಳಿ
ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: 3 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

ಉಡುಪಿ: ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಮಂದಿ ಅಪರಾಧಿಗಳಿಗೆ ಜೀವಿತಾವಧಿ ಜೈಲು ಶಿಕ್ಷೆ ಪ್ರಕಟಿಸಿ ಉಡುಪಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.
ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ, ಗೆಳೆಯ ನಿರಂಜನ್ ಭಟ್ ಗೆ ಜೀವಿತಾವಧಿ ಶಿಕ್ಷೆ ನೀಡಲಾಗಿದೆ ಎಂದು ನ್ಯಾಯಧೀಶ ಸುಬ್ರಹ್ಮಣ್ಯ ಜೆ.ಎನ್. ತೀರ್ಪು ಪ್ರಕಟಿಸಿದ್ದಾರೆ.
ಐದನೇ ಆರೋಪಿ ಚಾಲಕ ರಾಘವೇಂದ್ರ ಖುಲಾಸೆಗೊಂಡಿದ್ದು, ನಾಲ್ಕನೇ ಆರೋಪಿ ನಿರಂಜನ್ ಭಟ್ ತಂದೆ ಶ್ರೀನಿವಾಸ್ ಭಟ್ ಅನಾರೋಗ್ಯದಿಂದ ಮೃತಪಟ್ಟಿದ್ದರು.