ರಾಜ್ಯ

ಕೋವಿಡ್ ಕೇರ್ ಸೆಂಟರ್’ನಲ್ಲಿ ಹೋಮ: ಶಾಸಕ ರೇಣುಕಾಚಾರ್ಯಗೆ ನೋಟಿಸ್

ದಾವಣಗೆರೆ: ಹೊನ್ನಾಳಿಯ ಅರಬಗಟ್ಟೆ ಕೋವಿಡ್ ಕೇರ್ ಸೆಂಟರ್​​ನಲ್ಲಿ ಧನ್ವಂತರಿ ಹಾಗೂ ಮೃತ್ಯುಂಜಯ ಹೋಮ ಮಾಡಿದ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರಿಗೆ ಜಿಲ್ಲಾಡಳಿತ ಶೋಕಾಸ್ ನೋಟಿಸ್ ನೀಡಿದೆ.

ಕೋವಿಡ್ ಕೇರ್ ಸೆಂಟರ್ ನಲ್ಲಿ ಹೋಮ ನಡೆಸಿದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ರೇಣುಕಾಚಾರ್ಯ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಈ ರೀತಿ ಯಾವುದೇ ಹೋಮ ಹವನದಂತಹ ಧಾರ್ಮಿಕ ಚಟುವಟಿಕೆ ನಡೆಸುವುದು ಕಾನೂನು ಬಾಹಿರ. ಹೀಗಾಗಿ ವಿಪತ್ತು ನಿರ್ವಹಣೆ ಕಾಯ್ದೆ ಹಾಗೂ ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆ ಅಡಿ ಕ್ರಮ ಕೈಗೊಳ್ಳಲಾಗುವುದು‌ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದ್ದಾರೆ.

Leave a Reply

Your email address will not be published. Required fields are marked *

Back to top button
error: Content is protected !!

Adblock Detected

Please consider supporting us by disabling your ad blocker