
ಉಡುಪಿ ಜಿಲ್ಲಾ ಚಿನ್ನ ಬೆಳ್ಳಿ ಕೆಲಸಗಾರರ ಸಂಘದ ವತಿಯಿಂದ ಇಂದು ದಿನಾಂಕ 23-08-2021 ರಂದು ಹಮ್ಮಿಕೊಳ್ಳಲಾದ ಚಿನ್ನ ಬೆಳ್ಳಿ ಕೆಲಸಗಾರರಿಗೆ ಉಚಿತ ಕೋವಿಡ್ ಲಸಿಕೆ ಕಾರ್ಯಕ್ರಮದಲ್ಲಿ ಶಾಸಕರಾದ ಕೆ. ರಘುಪತಿ ಭಟ್ ರವರು ಭಾಗವಹಿಸಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಚಿನ್ನ ಬೆಳ್ಳಿ ಕೆಲಸಗಾರರ ಸಂಘ ದ ಅಧ್ಯಕ್ಷ ಕಿಶೋರ್ ಆರ್ ಆಚಾರ್ಯ, ಉಪಾಧ್ಯಕ್ಷ ಪ್ರಭಾಕರ ಆಚಾರ್ಯ, ನಗರಸಭಾ ಸದಸ್ಯ ಗಿರಿಧರ ಆಚಾರ್ಯ, ಜಿಲ್ಲಾ ಬಿಜೆಪಿ ಪ್ರಕೋಷ್ಠಗಳ ಸಂಯೋಜಕರಾದ ಜಗದೀಶ್ ಆಚಾರ್ಯ ಕಪ್ಪೆಟ್ಟು, ಬಾಲಕೃಷ್ಣ ಆಚಾರ್ಯ, ಪ್ರಧಾನ ಕಾರ್ಯದರ್ಶಿ ಪ್ರಶಾಂತ ಆಚಾರ್ಯ. ಉಪಸ್ಥಿತರಿದ್ದರು