ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಉಚಿತ ಆರೋಗ್ಯ ತಪಾಸಣಾ ಕಾರ್ಡ್ ಬಿಡುಗಡೆ ಸಮಾರಂಭ

ಆದರ್ಶ ಆಸ್ಪತ್ರೆ, ಉಡುಪಿ ಮತ್ತು ಆದರ್ಶ ಚಾರಿಟೇಬಲ್ ಟ್ರಸ್ಟ್ (ರಿ.) ಇವರ ಆಶ್ರಯದಲ್ಲಿ ವಿಶ್ವ ಡಯಾಬಿಟೀಸ್ ದಿನಾಚರಣೆ ಪ್ರಯುಕ್ತ ಸಾರ್ವಜನಿಕರಿಗೆ, ಉಡುಪಿ ತಾಲೂಕು ಗ್ರಾಮ ಪಂಚಾಯತ್ ಸದಸ್ಯರಿಗೆ ಮತ್ತು ಸಿಬ್ಬಂದಿಗಳಿಗೆ ಆದರ್ಶ ಆಸ್ಪತ್ರೆಯಲ್ಲಿ ಇಂದು ದಿನಾಂಕ 14-11-2021 ರಂದು ಆಯೋಜಿಸಲಾದ ” ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಉಡುಪಿ ಜಿಲ್ಲಾ ಗ್ರಾಮ ಪಂಚಾಯತ್ ಸದಸ್ಯರಿಗೆ ಉಚಿತ ಆರೋಗ್ಯ ತಪಾಸಣಾ ಕಾರ್ಡ್ ಬಿಡುಗಡೆ ಸಮಾರಂಭ”ದಲ್ಲಿ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ. ಸುನಿಲ್ ಕುಮಾರ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಗೀತಾಂಜಲಿ ಸುವರ್ಣ, ಉದ್ಯಮಿ, ಸಮಾಜ ಸೇವಕರಾದ ಗುರ್ಮೆ ಸುರೇಶ್ ಶೆಟ್ಟಿ ಮತ್ತು ಜಿಲ್ಲಾ ಶಸ್ತ್ರಚಿಕಿತ್ಸಕರಾದ ಮಧುಸೂದನ್ ನಾಯಕ್, ನರ ರೋಗ ತಜ್ಞರಾದ ಡಾll. ರಾಜ, ಆದರ್ಶ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾll. ಚಂದ್ರಶೇಖರ್ ಹಾಗೂ ಆದರ್ಶ ಚಾರಿಟೇಬಲ್ ಟ್ರಸ್ಟ್ ನ ಸದಸ್ಯರು, ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.