
ಉತ್ತರಕನ್ನಡ/ಶಿರಸಿ: ದ್ವಿತೀಯ ಪಿಯುಸಿ ಪರೀಕ್ಷೆ ರದ್ದಾದ ಕಾರಣ ಮನನೊಂದು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿಯ ಸಹಸ್ರಳ್ಳಿಯಲ್ಲಿ ನಡೆದಿದೆ. ಧನ್ಯಾ ಆಚಾರಿ( 18) ಮೃತ ವಿದ್ಯಾರ್ಥಿನಿ.
ಶಿರಸಿಯ ಮಾರಿಕಾಂಬಾ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದ ಧನ್ಯಾ ಕಾಲೇಜಿಗೆ ಈ ಬಾರಿ ಪ್ರಥಮ ಬರಬೇಕು ಎಂದುಕೊಂಡಿದ್ದಳು. ಆದರೆ ಕೊರೋನಾ ಕಾರಣದಿಂದ ಪ್ರಥಮ ಪಿಯುಸಿ ಆಧಾರದ ಮೇಲೆ ಅಂಕ ಕೊಡಲು ತೀರ್ಮಾನವಾದ ಹಿನ್ನೆಲೆಯಲ್ಲಿ ಓದಿದ್ದು ವ್ಯರ್ಥವಾಯಿತು ಎಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿದೆ. ಮನೆಯಲ್ಲಿ ಸೀರೆಯಿಂದ ನೇಣು ಬಿಗಿದುಕೊಂಡು ಧನ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದು, ಶಿರಸಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.