ಕರಾವಳಿ

ದ.ಕ.ಜಿಲ್ಲೆಯ17 ಗ್ರಾ.ಪಂ. ಸೀಲ್‌ಡೌನ್ ! ಸಂಪೂರ್ಣ ವಿವರ ಇಲ್ಲಿದೆ ನೋಡಿ.

ಮಂಗಳೂರು : ಕೊರೊನಾ ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಹಾಗೂ ಸೋಂಕಿನ ಪ್ರಮಾಣ ಕಡಿಮೆಗೊಳಿಸುವ ನಿಟ್ಟಿನಲ್ಲಿ ದ.ಕ. ಜಿಲ್ಲೆಯ 17 ಗ್ರಾಪಂಗಳನ್ನು ಜೂ.14ರಿಂದ ಬೆಳಗ್ಗೆ 9 ಗಂಟೆಯಿಂದ ಜೂ. 21ರ ಬೆಳಗ್ಗೆ 9 ಗಂಟೆಯವರೆಗೆ ಸೀಲ್ಡೌನ್ ಮಾಡಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.

ಈ ಸಮಯದಲ್ಲಿ ಯಾವುದಕ್ಕೆ ಅನುಮತಿ ಇದೆ ಎಂಬುದಕ್ಕೆ ಇಲ್ಲಿದೆ ಮಾಹಿತಿ

  • ಸೀಲ್‌ಡೌನ್ ಆಗಿರುವ 17 ಗ್ರಾಪಂನ ವ್ಯಾಪ್ತಿಗಳಿಗೆ ಹೊರಗಿನಿಂದ ಬರುವವರು ಮತ್ತು ಅಲ್ಲಿಂದ ಹೊರಗೆ ಹೋಗುವವರಿಗೆ ನಿರ್ಬಂಧಗಳನ್ನು ವಿಧಿಸಲಾಗಿದೆ.
  • ನರ್ಸಿಂಗ್ ಹೋಂ, ಕ್ಲಿನಿಕ್, ಲ್ಯಾಬ್, ಟಲಿಮೆಡಿಸಿನ್, ರಕ್ತ ಸಂಗ್ರಹ ಕೇಂದ್ರ ಇತ್ಯಾದಿ ತೆರೆಯಲು ಅವಕಾಶ ಕಲ್ಪಿಸಲಾಗಿದೆ.
  • ಕೆಎಂಎಫ್ ಹಾಲಿನ ಬೂತ್ ಮತ್ತು ರಾಜ್ಯ, ರಾಷ್ಟ್ರ ಹೆದ್ದಾರಿ ಪಕ್ಕದ ಪೆಟ್ರೋಲ್ ಬಂಕ್‌ಗಳನ್ನು ತೆರೆಯಬಹುದು.
  • ವೈದ್ಯಕೀಯ ಮತ್ತು ಇತರ ತುರ್ತು ಅಗತ್ಯ ಸೇವೆಗೆ ವಾಹನ ಓಡಾಟಕ್ಕೆ ಅನುಮತಿ ನೀಡಲಾಗುತ್ತದೆ.

ದ.ಕ.ಜಿಪಂ ಸಿಇಒ ಅವರ ವರದಿ ಆಧರಿಸಿ 50ಕ್ಕಿಂತ ಅಧಿಕ ಕೋವಿಡ್ ಸಕ್ರಿಯ ಪ್ರಕರಣಗಳು ಇರುವ ಗ್ರಾಪಂಗಳನ್ನು ಸೀಲ್ಡೌನ್ ಮಾಡುವ ನಿರ್ಧಾರವನ್ನು ಜಿಲ್ಲಾಧಿಕಾರಿಯವರು ತೆಗೆದುಕೊಂಡಿದ್ದಾರೆ.

ಅದರಂತೆ ಮಂಗಳೂರು ತಾಲೂಕಿನ ಕೊಣಾಜೆ ಮತ್ತು ನೀರುಮಾರ್ಗ, ಬೆಳ್ತಂಗಡಿ ತಾಲೂಕಿನ ನಾರಾವಿ, ಕೊಯ್ಯೂರು, ಮಿತ್ತಬಾಗಿಲು, ಮಾಲಾಡಿ, ನೆರಿಯ, ಲಾಯಿಲ, ಉಜಿರೆ ಮತ್ತು ಚಾರ್ಮಾಡಿ ,ಸುಳ್ಯ ತಾಲೂಕಿನ ಐವರ್ನಾಡು, ಅಮರ ಮುಡ್ನೂರು, ಕೊಲ್ಲಮೊಗರು, ಗುತ್ತಿಗಾರು, ಅರಂತೋಡು, ಕಡಬ ತಾಲೂಕಿನ ಸುಬ್ರಹ್ಮಣ್ಯ ಹಾಗೂ ಸವಣೂರು ಸಹಿತ 17 ಗ್ರಾಪಂಗಳು ಸಂಪೂರ್ಣ ಸೀಲ್‌ಡೌನ್ ಆಗಲಿದೆ.

ಕೊರೋನ ಸೋಂಕು ತಗ್ಗಿಸಲು ಕೆಲವು ಕಠಿಣ ನಿರ್ಧಾರ ಕೈಗೊಳ್ಳುವುದು ಅಗತ್ಯವಾಗಿದ್ದು, ನಾಗರಿಕರು ಸಹಕರಿಸಬೇಕು ಎಂದು ಜಿಪಂ ಸಿಇಒ ಡಾ.ಕುಮಾರ್ ಮನವಿ ಮಾಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!